Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮಂಗಳೂರು ದರೋಡೆ ಪ್ರಕರಣ ಬೇಧಿಸಿದ ಪೊಲೀಸರು : ಸಿಕ್ಕಿದ್ದು ಎಷ್ಟು ಕೋಟಿ ಚಿನ್ನ..!

---Advertisement---

ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ದರೋಡೆ ಎಂದರೆ ಅದು ಕೋಟೆಕಾರು ದರೋಡೆ. ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ದರೋಡೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ಈ ಪ್ರಕರಣವನ್ನು ಬೇಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಕೋಟಿ ಕೋಟಿ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. 18.314 ಕೆಜಿಯ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖದೀಮರು ಕದ್ದ ಚಿನ್ನ ಸುಮಾರು 14 ಕೋಟಿ ಬೆಲೆ ಬಾಳುತ್ತದೆ.

ಅಷ್ಟೇ ಅಲ್ಲ ಖದೀಮರು ಕೃತ್ಯಕ್ಕೆ ಬಳಸಿದ್ದ ಫಿಯಟ್ ಕಾರು, 2 ಮಚ್ಚು, 2 ಪಿಸ್ತೂಲು ಹಾಗೂ 3 ಜೀವಂತ ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಹಾಗೇ ಬಂಧಿತರಿಂದ 3.80 ಲಕ್ಷ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.‌ ಮುಂಬೈನ ಪದ್ಮನೇರಿ ಗ್ರಾಮದ ಮುರುಗುಂಡಿ ಥೇವರ್, ದೊಂಬಿನಲಿ ವೆಸ್ಟ್ ನ ಯೆಸುವಾ ರಾಜೇಂದ್ರನ್, ಕಣ್ಣಬ್ ಮಣಿ, ಷಣ್ಮುಗ ಸುಂದರಂ ಎಂಬುವವರು ಅರೆಸ್ಟ್ ಆಗಿದ್ದಾರೆ. ಬ್ಯಾಂಕ್ ನಲ್ಲಿ ದರೋಡೆ ನಡೆಸಿದ ಬಳಿಕ ಆರೋಪಿಗಳು ಎಸ್ಕೇಪ್ ಆಗಿದ್ದರು. ಅದನ್ನು ಬೇಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಗಳೂರಿನ ಉಳ್ಳಾಲ ತಾಲೂಕಿನ ಕೆಸಿ ರೋಡ್ ಜಂಕ್ಷನ್ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಜನವರಿ 17ರಂದು ದರೋಡೆ ನಡೆದಿತ್ತು. ಹಾಡ ಹಗಲೇ ದರೋಡೆ ಮಾಡಿದ್ದರು. ದರೋಡೆ ಮಾಡಿದ ಬಳಿಕ ಇಬ್ಬರು ತಲಪಾಡಿ ಗೇಟಿನಿಂದ ಕೇರಳ ಕಡೆಗೆ ಪರಾರಿಯಾಗಿದ್ದರೆ, ನಾಲ್ವರು ಆರೋಪಿಗಳು ಮಂಗಳೂರು ರೈಲು ನಿಲ್ದಾಣಕ್ಕೆ ತೆರಳಿದ್ದರು. ಇವರಲ್ಲಿ ಮೂವರು ಆಟೋದಲ್ಲಿ, ಮತ್ತೊಬ್ಬ ಬಸ್ಸಿನಲ್ಲಿ ಪ್ರಯಾಣಿಸಿ ಎಸ್ಕೇಪ್ ಆಗಿದ್ದ. ಆದರೆ ಈಗ ಪೊಲೀಸರು ಬೀಸಿದ ಬಲೆಯಲ್ಲಿ ಸಿಲುಕಿದ್ದಾರೆ.k

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...