ಬೆಂಗಳೂರು: ಹಿರಿಯ ನಟ ಶಿವರಾಮ್ ನಿಧನರಾಗಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. 84 ವರ್ಷ ವಯಸ್ಸಾಗಿದ್ದರು, ಎಲ್ಲಾ ಕಾರ್ಯ ಚಟುವಟಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಆದ್ರೆ ಇಂದು ನಿಧನರಾಗಿದ್ದಾರೆ.
ಮಿದುಳು ನಿಷ್ಕ್ರಿಯಗೊಂಡ ಕಾರಣ ನಿಧನರಾಗಿದ್ದಾರೆ. ಮನೆಯಲ್ಲಿ ಪೂಜೆ ವೇಳೆ ನೆಲಕ್ಕೆ ಬಿದ್ದಿದ್ದರು. ಹೀಗಾಗಿ ತೀವ್ರವಾಗಿ ಗಾಯಗೊಂಡಿದ್ದರು. ಕಳೆದ ಐದು ದಿನದಿಂದಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಈ ಸಂಬಂಧ ಅವರ ಪುತ್ರ ಲಕ್ಷ್ಮೀಶ್ ಈ ಬಗ್ಗೆ ಮಾಹಿತಿ ನೀಡಿದ್ದು, ತಂದೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಈ ಸಮಯದಲ್ಲಿ ಪ್ರಶಾಂತ್ ಆಸ್ಪತ್ರೆಯವರು ಸಾಕಷ್ಟು ಚೆನ್ನಾಗಿ ನೋಡಿಕೊಂಡಿದ್ದರು. ಚಿತ್ರೋದ್ಯಮ ಕೂಡ ಈ ಸಮಯದಲ್ಲಿ ಸಾಕಷ್ಟು ಬೆಂಬಲ ನೀಡಿದೆ. ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.