Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೊಮ್ಮೇನಹಳ್ಳಿಯಲ್ಲಿ ಗೋಕಟ್ಟೆ ಶಿಲಾನ್ಯಾಸ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜನವರಿ. 27 : ತಾಲ್ಲೂಕಿನ
ಭೀಮಸಮುದ್ರ ಸಮೀಪದ ಬೊಮ್ಮೇನಹಳ್ಳಿ ಗ್ರಾಮದ ಪುನಶ್ಚೇತನ ಗೊಳಿಸಿದ 693ನೇ ಗೋಕಟ್ಟೆ ಕೆರೆಯ ನಾಮಫಲಕ ಅನಾವರಣ ಹಾಗೂ ಹಸ್ತಾಂತರ ಕಾರ್ಯಕ್ರಮವನ್ನು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ನಿರ್ದೇಶಕರಾದ ದಿನೇಶ್ ಪೂಜಾರಿ ಮಾತನಾಡಿ, 1982 ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ಥಾಪನೆಯಾಗಿದ್ದು ಇದರ ಯೋಜನೆಯ ಅಧ್ಯಕ್ಷರಾದ ಡಾ. ಡಿ.ವೀರೇಂದ್ರ ಹೆಗ್ಗಡೆ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಗ್ರಾಮಗಳ ಅಭಿವೃದ್ಧಿಗೆ ನೀಡಿದ ಹುಡುಗಿಯಾಗಿ ನೀಡಿದ್ದಾರೆ.

ರಾಜ್ಯದಲ್ಲಿ 900 ಕೆರೆಗಳನ್ನು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪುನಶ್ಚೇತನ ಗೊಳಿಸಲಾಗಿದೆ. ಮುಂದಿನ ಎರಡು ತಿಂಗಳ ಅವಧಿಯಲ್ಲಿ 1000 ಕೆರೆಗಳನ್ನು ಪುನಶ್ಚೇತನ ಗೊಳಿಸುವ ಗುರಿ ಇಟ್ಟುಕೊಂಡಿದ್ದೇವೆ. ಬೊಮ್ಮನಹಳ್ಳಿಯ 693 ಯನ್ನು ಪುನಶ್ಚೇತನ ಗೋಕಟ್ಟೆಯಾಗಿದ್ದು ಊಳೆತ್ತುವ ಕಾರ್ಯಕ್ರಮ ಮುಗಿದ ನಂತರ ಮಳೆಯಿಂದ ಕೆರೆ ಪೂರ್ಣ ಪ್ರಾಮಾಣದ ನೀರು ತುಂಬಿಕೊಂಡಿದೆ. ಗ್ರಾಮದ ಸುತ್ತ ಮುತ್ತಲಿನ ರೈತರ ಜಮೀನುಗಳಿಗೆ ಅಂತರ್ಜಲ ಮಟ್ಟ ಹೆಚ್ಚಾಗಿದೆ ಎಂದು ರೈತರು ತಿಳಿಸಿದ್ದಾರೆ. ನಮ್ಮಸುತ್ತಮುತ್ತಲಿನ ಜೀವಸಂಕುಲಕ್ಕೆ ಪ್ರತಿಯೊಬ್ಬ ಮನುಷ್ಯನಿಗೂ ಪ್ರಪಂಚದ ಪಂಚಭೂತಗಳು ಗಾಳಿ, ನೀರು, ಬೆಳಕು,ಭೂಮಿ,ಅಗ್ನಿ ಇವುಗಳನ್ನು ನಾವು ನಿರಂತರವಾಗಿ ಮುಂದಿನ ಪೀಳಿಗೆಗೆ ಕಾಪಾಡಿಕೊಂಡು ಹೋಗಬೇಕಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಬೊಮ್ಮೇನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀ ಮತಿ ಸುಮಲತಾ,
ಉಪಾಧ್ಯಕ್ಷರು ಶ್ರೀ ಮತಿ ಸುನಂದಮ್ಮ, ಸಿದ್ದೇಶ್
ಗ್ರಾಮ ಪಂಚಾಯತ್ ಸದಸ್ಯರು,
ಜನ ಜಾಗೃತಿ ವೇದಿಕೆ ಸದಸ್ಯರು ರಾಜು ನಾಯಕ್, ಒಕ್ಕೂಟದ ಅಧ್ಯಕ್ಷರು ಶ್ರೀಮತಿ ರೇಖಾ, ಚಿತ್ರದುರ್ಗ ಪ್ರಾದೇಶಿಕ ವ್ಯಾಪ್ತಿಯ ಯೋಜನೆ ಕೆರೆ ವಿಭಾಗದ ಅಭಿಯಂತರರಾದ ಹರೀಶ್ ಹಾಗೂ ಸಂಘದ ಪದಾಧಿಕಾರಿಗಳು ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಉಪಚಿತರಿದ್ದರು. ಈ ಸಂದರ್ಭದಲ್ಲಿ ಕೆರೆ ಸಮಿತಿ ಸರ್ವ ಸದಸ್ಯರಿಗೆ ಹಸ್ತಾಂತರ ಪ್ರತಿಯನ್ನು ನೀಡಲಾಯಿತು

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...