Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಸಿದ್ದರಾಮಯ್ಯರ ಪತ್ನಿಗೆ ಬಿಗ್ ರಿಲೀಫ್: ಹೈಕೋರ್ಟ್ ನಿಂದ ಮಹತ್ವದ ಆದೇಶ

---Advertisement---

ಬೆಂಗಳೂರು: ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಬಿಗ್ ರಿಲೀಫ್ ಸಿಕ್ಕಿದೆ. ಜಾರಿ ನಿರ್ದೇಶನಾಲಯ ಜಾರಿಗೊಳಿಸಿದ್ದ ಸಮನ್ಸ್ ಗೆ ಹೈಕೋರ್ಟ್ ತಡೆ ನೀಡಿದೆ. ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ನೋಟೀಸ್ ನೀಡಿತ್ತು. ಈ ಹಿನ್ನೆಲೆ ಇಬ್ಬರು ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇದೀಗ ಹೈಕೋರ್ಟ್ ಇಡಿ ಸಮನ್ಸ್ ಗೆ ತಡೆಯಾಜ್ಞೆ ಹೊರಡಿಸಿದೆ.

ಈ ಕೇಸ್ ಗೆ ಸಂಬಂಧಿಸಿದಂತೆ ವಾದ ಪ್ರತಿವಾದ ಆಲಿಸಿದ್ದ ಕೋರ್ಟ್ ಆದೇಶವನ್ನು ಕಾಯ್ದಿರಿಸಿತ್ತು. ಇದೀಗ ತಡೆಯಾಜ್ಞೆ ನೀಡಿರುವ ಹೈಕೋರ್ಟ್ ಫೆಬ್ರವರಿ 10ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ. ಹೈಕೋರ್ಟ್ ನಲ್ಲಿ ಇಡಿ ಪರವಾಗಿ ಅರವಿಂದ ಕಾಮತ್ ಅವರು ಹಾಜರಾಗಿದ್ದರು. ಸಚಿವ ಭೈರತಿ ಸುರೇಶ್ ಪರವಾಗಿ ಸಿವಿ ನಾಗೇಶ್ ವಾದ ಮಂಡಿಸಿದರು. ನಾಳೆಯಿಂದ ಸುರೇಶ್ ಅವರ ಮಗನ ಮದುವೆ ಕಾರ್ಯ ಇರುವ ಬಗ್ಗೆಯೂ ವಾದ ಮಂಡನೆ ಮಾಡಲಾಯ್ತು.

ಇನ್ನು ಇಡಿ ಪರವಾಗಿ ವಾದ ಮಂಡಿಸಿದ ಅರವಿಂದ್ ಕಾಮತ್ ಅವರು, ಆ ಪೀಠದಲ್ಲಿ ಯಾವ ಆಧಾರದ ಮೇಲೆ ರದ್ದು ಮಾಡಿದೆ ಎಂಬುದು ಗೊತ್ತಿಲ್ಲ. ಸಮನ್ಸ್ ನೀಡುವ ಅಧಿಕಾರ ಇಡಿಗೆ ಇದೆ. ತನಿಖೆ ಮಾಡುವಾಗ ಯಾರಿಗೆ ಬೇಕಾದರೂ ಸಮನ್ಸ್ ನೀಡಬಹುದು ಎಂದು ಹೇಳಿದರು. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಪರ ವಾದ ಮಂಡಿಸಿದ ಸಂದೇಶ್ ಚೌಟಾ, ಸಮನ್ಸ್ ಗೆ ತಡೆ ನೀಡಬೇಕು ಎಂದು ಕೋರ್ಟ್ ಗೆ ಮನವಿ ಮಾಡಿದರು. ಸದ್ಯ ಇಡಿ ನೀಡಿರುವ ಸಮನ್ಸ್ ಗೆ ತಡೆಯಾಜ್ಞೆ ನೀಡಿದ್ದು, ಸಿಎಂ ಪತ್ನಿಗೆ ಬಿಗ್ ರಿಲೀಫ್ ಸಿಕ್ಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment