Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೌರವ ಧನ ಹೆಚ್ಚಳಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ. 28 : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಪ್ರಸಕ್ತ ಬಜೆಟ್‍ನಲ್ಲಿ ಗೌರವ ಧನ ಹೆಚ್ಚಿಸುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಸಮಿತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಪ್ರಿಯಾಂಕಗಾಂಧಿ ಘೋಷಿಸಿದ ಆರನೆ ಗ್ಯಾರೆಂಟಿಯಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ಹದಿನೈದು ಸಾವಿರ ರೂ. ಸಹಾಯಕಿಯರಿಗೆ ಹತ್ತು ಸಾವಿರ ರೂ.ಗಳ ಗೌರವ ಧನ ನೀಡಬೇಕು. ರಾಜ್ಯದಲ್ಲಿ ಒಂದು ಲಕ್ಷದ ನಲವತ್ತು ಸಾವಿರ ಅಂಗನವಾಡಿ ನೌಕರರು ಜೀವನ ಭದ್ರೆತೆಯಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಅಂಗನವಾಡಿಯಲ್ಲಿ ಮಕ್ಕಳ ಲಾಲನೆ, ಪಾಲನೆ, ಶಾಲಾ ಪೂರ್ವ ಶಿಕ್ಷಣ ನೀಡುವುದು. ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕಾಂಶ ಆಹಾರ ಪೂರೈಸಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿರುವ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಬೇಡಿಕೆಗಳನ್ನು ಸರ್ಕಾರ ತಿರಸ್ಕರಿಸುತ್ತ ಬರುತ್ತಿರುವುದು ನೋವಿನ ಸಂಗತಿ. ಗುಜರಾತ್ ಉಚ್ಚ ನ್ಯಾಯಾಲಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಕನಿಷ್ಠ ವೇತನ ನಿಗಧಿಗೊಳಿಸುವಂತೆ ಆದೇಶಿಸಿ ತೀರ್ಪು ನೀಡಿದೆ. ರಾಜ್ಯ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಗೌರವ ಧನ ಹೆಚ್ಚಳವಾಗಬೇಕೆಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‍ಬಾಬು ಒತ್ತಾಯಿಸಿದರು.

ಕಾಂ.ಎಸ್.ಭಾಗ್ಯಮ್ಮ, ಕಾಂ.ಜಮುನಾಬಾಯಿ, ಕಾಂ.ಪಿ.ಕೆ.ವಿನೋದಮ್ಮ, ಕಾಂ.ಎಂ.ಸಾವಿತ್ರಮ್ಮ, ಕಾಂ.ರಾಧಮ್ಮ, ಕಾಂ.ಈ.ಸತ್ಯಕೀರ್ತಿ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...