Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ |ಅಕ್ರಮ ಸೇಂದಿ ಮಾರಾಟ : ಇಬ್ಬರ ಬಂಧನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188

ಸುದ್ದಿಒನ್, ಚಳ್ಳಕೆರೆ, ಜನವರಿ. 28 : ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ನಿಷೇಧಿತ ಸೇಂದಿ ಸಾಗಿಸುತ್ತಿದ್ದ ಇಬ್ಬರನ್ನು ಚಳ್ಳಕೆರೆ ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸ್ವಾಮಿ ಮತ್ತು ನಾಗರಾಜ್ ಬಂಧಿತ ಆರೋಪಿಗಳು. ಅವರಿಂದ 51 ಸಾವಿರ ರೂಪಾಯಿ ಮೌಲ್ಯದ 21 ಲೀಟರ್ ನಿಷೇದಿತ ಸೇಂದಿ ಹಾಗೂ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದು, ನ್ಯಾಂಗಬಂಧನಕ್ಕೆ ಒಳಪಡಿಸಲಾಗಿದೆ.

ಇವರು ತಾಲೂಕಿನ ಮಲ್ಲಸಮುದ್ರ ಗ್ರಾಮದ ಸಮೀಪ ನಿಷೇಧಿತ ಸೇಂದಿ ಸಾಗಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಅಬಕಾರಿ ಉಪ ಆಯುಕ್ತರು ಹಾಗೂ ಅಬಕಾರಿ ಉಪ ಅಧೀಕ್ಷಕರ ನಿರ್ದೇಶನದ ಮೇರೆಗೆ ಚಳ್ಳಕೆರೆ ಅಬಕಾರಿ ನಿರೀಕ್ಷಕ ಈ ನಾಗರಾಜು ಇವರ ನೇತೃತ್ವದಲ್ಲಿ ಅಬಕಾರಿ ಅಬಕಾರಿ ಉಪನಿರೀಕ್ಷಕರು ಟಿ. ರಂಗಸ್ವಾಮಿ ಇವರ ನೇತೃತ್ವದ ತಂಡ ದಾಳಿ ನಡರಸಿದ್ದಾರೆ.

ಈ ಸಂದರ್ಭದಲ್ಲಿ ಅಬಕಾರಿ ಉಪನಿರೀಕ್ಷಕ ಡಿ.ಟಿ. ತಿಪ್ಪಯ್ಯ, ಚಳ್ಳಕೆರೆ ವಲಯ ಅಬಕಾರಿ ಮುಖ್ಯಪೇದೆಗಳಾದ ನಾಗರಾಜು, ಸೋಮಶೇಖರ್, ಮಂಜುಳಮ್ಮ, ದರ್ಶನ್ ಕುಮಾರ್, ವಾಹನ ಚಾಲಕರದ ನವನೀತ ಮತ್ತು ಗೃಹರಕ್ಷಕರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment