ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಲೋಕಾಯುಕ್ತ ತನಿಂಎ ನಡೆಸುತ್ತಿದೆ. ಇದರ ನಡುವೆ ಇಡಿ ಕೂಡ ತಾನೇ ತನಿಖೆ ನಡೆಸುತ್ತಿದೆ. ಇದರ ನಡುವೆ ಸಿಬಿಐಗೆ ವಹಿಸುವಂತೆ ಒತ್ತಡಗಳು ಕೇಳಿ ಬರುತ್ತಿವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಈ ಕೇಸನ್ನ ಸಿಬಿಐಗೆ ವಹಿಸುವುದಕ್ಕೆ ನನಗೇನು ಭಯವಿಲ್ಲ ಎಂದಿದ್ದಾರೆ.
ನ್ಯಾಯಲಯದಲ್ಲಿ ನಮಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ಇದೆ. ಜಾರಿ ನಿರ್ದೇಶನಾಲಯದವರು ನನ್ನ ಪತ್ನಿಗೆ ನೋಟೀಸ್ ಜಾರಿ ಮಾಡಿದ್ದರು. ನ್ಯಾಯಾಲಯ ಅದಕ್ಕೆ ತಡೆಯಾಜ್ಞೆ ನೀಡಿದೆ. ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಸಿಬಿಐಗೆ ವಹಿಸುವ ಬಗ್ಗೆ ಕೋರ್ಟ್ ನಲ್ಲಿ ಕೇಸ್ ನಡೆಯುತ್ತಿದೆ. ಈ ಹಂತದಲ್ಲಿ ಆತುರ ಮಾಡುವುದು ಸರಿಯಲ್ಲ ಎಂದು ನ್ಯಾಯಾಮೂರ್ತಿಗಳು ಹೇಳಿದ್ದಾರೆ. ಇಡಿ ನೋಟೀಸ್ ಮಾತ್ರವೇ ರಾಜಕೀಯ ಪ್ರೇರಿತವಲ್ಲ, ಇಡೀ ಮೂಡಾ ಪ್ರಕರಣವೇ ರಾಜಕೀಯ ಪ್ರೇರಿತವಾಗಿದೆ. ಮೈಸೂರಿನ ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.
ಲೋಕಾಯುಕ್ತ ಪೊಲೀಸರು ಅಂತಿಮ ವರದಿ ಸಲ್ಲಿಕೆ ಮಾಡಲು ಗಡುವು ಕೂಡ ವಿಸ್ತರಿಸಿದೆ. ಈ ಹಿನ್ನೆಲೆ ಆದೇಶ ಕಾಯ್ದಿರಿಸಿರುವುದರಿಂದ ಸಿದ್ದರಾಮಯ್ಯ ಅವರು ಆತಂಕದಲ್ಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಸಿದ್ದರಾಮಯ್ಯ ಅವರು ಈ ಕೇಸ್ ಸಿಬಿಐಗೆ ವಹಿಸಿದರೂ ಯಾವುದೇ ಆತಂಕವಿಲ್ಲ, ಕಾನೂನು ಹೋರಾಟ ಮುಂದುವರಿಸುವುದಾಗಿ ಸವಾಲೊಡ್ಡಿದ್ದಾರೆ. ಸದ್ಯ ಲೋಕಾಯುಕ್ತ ನಡೆಸಿದ ತನಿಖೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















