ಪ್ರಯಾಗ್ ರಾಜ್: ಮಹಾಕುಂಭಮೇಳದಲ್ಲಿ ಭಾಗವಹಿಸಲೇಬೇಕೆಂದು ಕೋಟ್ಯಾಂತರ ಜನ ಪ್ರಯಾಗ್ ರಾಜ್ ಗೆ ಭೇಟಿ ನೀಡುತ್ತಲೆ ಇದ್ದಾರೆ. ಮಹಾಕುಂಭಮೇಳದಲ್ಲಿ ಜನಸಂಖ್ಯೆ ಹೆಚ್ಚಾಗಿದ್ದು, ಇದೀಗ ಕಾಲ್ತುಳಿತ ಸಂಭವಿಸಿ, ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಹಲವು ಭಕ್ತರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
ಸಂಗಮ್ ಪ್ರದೇಶದಲ್ಲಿ ಅಮೃತ್ ಸ್ನಾನ ಮಾಡಲು ಇರುವ ಹೆಚ್ಚಿನ ಪಾಂಟೂನ್ ಸೇತುವೆಗಳನ್ನು ಮುಚ್ಚಲಾಗಿತ್ತು. ಇದರಿಂದ ಸಂಗಮದಲ್ಲಿ ಕೋಟಿಗಟ್ಟಲೆ ಜನ ಸೇರತೊಡಗಿದರು. ಕ್ಷಣದಿಂದ ಕ್ಷಣಕ್ಕೆ ಭಕ್ತರ ದಟ್ಟಣೆ ನಿರಂತರವಾಗಿ ಹೆಚ್ಚಾಗುತ್ತಲೇ ಹೋಯಿತು. ಹಲವು ಭಕ್ತರು ಬ್ಯಾರಿಕೇಡ್ ಗಳಲ್ಲಿ ಸಿಲುಕಿಕೊಂಡಿದ್ದರು. ಇದರಿಂದಲೂ ಕಾಲ್ತುಳಿತ ಸಂಭವಿಸಿರಬಹುದು ಎನ್ನಲಾಗಿದೆ. ಇನ್ನಿ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಧ್ಯರಾತ್ರಿಯೇ ಆಂಬ್ಯುಲೆನ್ಸ್ ಗಳು ಸ್ಥಳಕ್ಕೆ ಆಗಮಿಸಿದ್ದವು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ತಕ್ಷಣ ಭದ್ರತಾ ಪಡೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿತ್ತು.
ಈ ಬಗ್ಗೆ ಮಾತನಾಡಿದ ಸಿಎಂ ಯೋಗಿ ಆದಿತ್ಯಾನಾಥ್, ಮೌನಿ ಅಮಾವಾಸ್ಯೆ ಹಿನ್ನೆಲೆ ಇಂದು ರಾತ್ರಿಯವರೆಗೆ ಅಮೃತ ಸ್ನಾನಕ್ಕೆ ಶುಭಗಳಿಗೆ ಇದೆ. ಇಂದು ಬೆಳಗ್ಗೆಯೇ 3 ಕೋಟಿಗೂ ಅಧಿಕ ಜನ ಅಮೃತ ಸ್ನಾನ ಮಾಡಿದ್ದಾರೆ. ಸ್ನಾನ ಮಾಡುವುದಕ್ಕೆ ಎಲ್ಲರೂ ಸಂಗಮ್ ಕಡೆಗೆ ಬರಬೇಡಿ. ನಿಮಗೆ ಸಮೀಪವಿರುವ ನದಿಯ ಸೆಕ್ಟರ್ ಬಳಿ ಹೋಗಿ. ಎಲ್ಲರಿಗೂ ಸ್ನಾನಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಮಧ್ಯರಾತ್ರಿ ಕಾಲ್ತುಳಿತದ ಘಟನೆ ನಡೆದಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.

ಮಹಾಕುಂಭಮೇಳದ ಕಾಲ್ತುಳಿತದಲ್ಲಿ 50ಕ್ಕೂ ಹೆಚ್ವು ಜನ ಗಾಯಗೊಂಡಿದ್ದರೆ, ಕೆಲವರು ಸಾವನ್ನಪ್ಪಿದ್ದಾರೆ. ಗಾಯಗೊಂಡವರಲ್ಲಿ ಕರ್ನಾಟಕದ ಜನತೆಯೂ ಸೇರಿದ್ದಾರೆ. ಮಹಾಕುಂಭಮೇಳಕ್ಕೆ ಹೋಗುವ ಭಕ್ತರು ಕೊಂಚ ಎಚ್ಚರದಿಂದ ಹೋಗಿ ಬನ್ನಿ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








