Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಬಹುಮಾನ ಪಡೆದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು

---Advertisement---

 

 

 

ಸುದ್ದಿಒನ್, ಚಿತ್ರದುರ್ಗ, ಜನವರಿ. 29 :
ನಗರದ ಪ್ರತಿಷ್ಠಿತ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ಐಸಿಎಸ್‍ಸಿ ವಿಭಾಗದ 9ನೇ ತರಗತಿಯ ಟಿ.ಜಾಗೃತ್ ಮತ್ತು ಹರ್ಷವರ್ಧನ್.ಎಸ್ ಇವರು ಜನವರಿ 21 ರಿಂದ 25 ರವರೆಗೂ ಶಾಲಾ ಶಿಕ್ಷಣ ಇಲಾಖೆ ನಿರ್ದೇಶನಾಲಯದ ವತಿಯಿಂದ ಪಾಂಡಿಚೇರಿಯಲ್ಲಿ ನಡೆದ “ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಪ್ರದರ್ಶನ – 2025” (S.I.S. F-2025) ದಲ್ಲಿ “ಬಹುಪಯೋಗಿ ಆಧುನಿಕ ಎತ್ತಿನ ಗಾಡಿ” [Versatile and Modern Bullock cart]] ಎಂಬ ಶೀರ್ಷಿಕೆಯ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಿ, ಮಾದರಿಯನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡರೆ ನಮಗಾಗುವ ಅನುಕೂಲಗಳು ಹಾಗೂ ಹಣದ ಮಿತವ್ಯಯದ ಬಗ್ಗೆ, ನಮಗೆ ದೊರೆಯುವ ಸಂಪನ್ಮೂಲಗಳನ್ನು ಸುಲಭವಾಗಿ ಹೇಗೆ ನಾವು ಬಳಸಿಕೊಳ್ಳಬಹುದು ಎಂಬುದರ ಬಗ್ಗೆ ಇವರು ನೀಡಿದ ವಿವರಣೆ ಮತ್ತು ಅತ್ಯಾಕರ್ಷಕ ಮಾದರಿಯು ಎಲ್ಲರ ಮೆಚ್ಚುಗೆ ಗಳಿಸಿ, “ರಾಷ್ಟ್ರ ಮಟ್ಟದಲ್ಲಿ ಮೂರನೇ ಬಹುಮಾನ” ಪಡೆದಿದೆ. ಅಷ್ಟೇ ಅಲ್ಲದೆ, ದಕ್ಷಿಣ ಭಾರತದ ರಾಜ್ಯಗಳ ವಿಭಾಗದಲ್ಲಿ “ಐದನೇ ಅತ್ಯುತ್ತಮ ವಿಜ್ಞಾನ ಮಾದರಿಯಾಗಿ” ಆಯ್ಕೆಯಾಗಿ, ಚಿತ್ರದುರ್ಗ ಜಿಲ್ಲೆಗಷ್ಟೇ ಅಲ್ಲದೆ ಕರ್ನಾಟಕ ರಾಜ್ಯಕ್ಕೆ ಕೀರ್ತಿಯನ್ನು ತಂದಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಈ ಸಾಧನೆ ಮಾಡಿದ ಶಾಲೆಯ ವಿದ್ಯಾರ್ಥಿಗಳಾದ ಜಾಗೃತ್.ಟಿ ಮತ್ತು ಹರ್ಷವರ್ದನ್.ಎಸ್ ಹಾಗೂ ಮಾರ್ಗದರ್ಶಿ ಶಿಕ್ಷಕಿಯಾದ ಆಶಾ.ಸಿ.ಹೆಚ್.ಎಮ್. ಅವರುಗಳಿಗೆ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿಗಳಾದ ಶ್ರೀ.ಬಿ.ವಿಜಯ್ ಕುಮಾರ್, ವ್ಯವಸ್ಥಾಪಕ ನಿರ್ದೇಶಕರಾದ, ಶ್ರೀ.ಎಸ್.ಎಂ ಪೃಥ್ವೀಶ ಹಾಗೂ ನಿರ್ದೇಶಕರಾದ ಶ್ರೀಮತಿ ಸುನಿತಾ.ಪಿ.ಸಿ, ಐಸಿಎಸ್‍ಇ ಪ್ರಾಚಾರ್ಯರಾದ ಬಸವರಾಜಯ್ಯ.ಪಿ, ಮುಖ್ಯ ಶಿಕ್ಷಕರಾದ ತಿಪ್ಪೇಸ್ವಾಮಿ.ಎನ್.ಜಿ, ಐಸಿಎಸ್‍ಇ ಉಪಪ್ರಾಚಾರ್ಯರಾದ ಅವಿನಾಶ್ ಬಿ, ಮತ್ತು ಎಲ್ಲಾ ಶಿಕ್ಷಕ/ಶಿಕ್ಷಕೇತರ ವೃಂದದವರು ಶ್ಲಾಘಿಸಿ ಅಭಿನಂದಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment