Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯ ನಾಗರೀಕರಿಗೆ ಆಯುಷ್ಮಾನ್ ವಯೋ ವಂದನ ಕಾರ್ಡ್ ವಿತರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ. 29 : ಹಿರಿಯ ನಾಗರೀಕರು, ವಿಕಲಚೇತನರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸುವಲ್ಲಿ ಬಸವೇಶ್ವರ ವಿದ್ಯಾಸಂಸ್ಥೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ವೀರೇಶ್ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ, ಸಬಲೀಕರಣ ಇಲಾಖೆ, ಬಸವೇಶ್ವರ ವಿದ್ಯಾಸಂಸ್ಥೆ ಸಂಯುಕ್ತಾಶ್ರಯದಲ್ಲಿ ಹೊಂಬೆಳಕು ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಹಿರಿಯ ನಾಗರೀಕರಿಗೆ ಆಯುಷ್ಮಾನ್ ವಯೋ ವಂದನ ಕಾರ್ಡ್ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ವಯಸ್ಸಾದ ಮೇಲೆ ಹಿರಿಯರು ಒಂದಲ್ಲ ಒಂದು ರೀತಿಯ ಕಷ್ಟಗಳನ್ನು ಅನುಭವಿಸುತ್ತಿರುತ್ತಾರೆ. ಸರ್ಕಾರಿ ನೌಕರಿಯಿಂದ ನಿವೃತ್ತಿಯಾಗಿ ಪಿಂಚಣಿ ಪಡೆಯುತ್ತಿರುವವರು
ನೆಮ್ಮದಿಯಾಗಿ ಬದುಕಬಹುದು. ಆದರೆ ಯಾವುದೇ ರೀತಿಯ ಸವಲತ್ತುಗಳಿಲ್ಲದೆ ಬದುಕುವುದು ಕಷ್ಟದ ಕೆಲಸ. ಇಂತಹ ಪರಿಸ್ಥಿತಿಯಲ್ಲಿ ಬಸವೇಶ್ವರ ವಿದ್ಯಾಸಂಸ್ಥೆ, ಹಿರಿಯ ನಾಗರೀಕರು ಹಾಗೂ ವಿಕಲಚೇತನರ ಪರವಾಗಿ ಕೆಲಸ ಮಾಡುತ್ತಿರುವುದು ನಿಜಕ್ಕೂ ಮೆಚ್ಚುವಂತದ್ದು ಎಂದು ಗುಣಗಾನ ಮಾಡಿದರು.

ಸಮಾಜ ಸೇವಕರಾದ ಎಸ್.ಷಣ್ಮುಖಪ್ಪ ಮಾತನಾಡುತ್ತ ಹಿರಿಯ ನಾಗರೀಕರು ಹಾಗೂ ವಿಕಲಚೇತನರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗುವ ಸೌಲತ್ತುಗಳು ತಲುಪಬೇಕು. ಈ ನಿಟ್ಟಿನಲ್ಲಿ ಬಸವೇಶ್ವರ ವಿದ್ಯಾಸಂಸ್ಥೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.

ನಿವೃತ್ತ ಪ್ರಾಚಾರ್ಯರಾದ ಕೋರಧಾನ್ಯ ಮಠದ ಗುರುಬಸವಯ್ಯ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಕಷ್ಟು ಯೋಜನೆಗಳಿವೆ. ಆದರೆ ಬಹಳಷ್ಟು ಜನರಿಗೆ ಗೊತ್ತಿರುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಬಸವೇಶ್ವರ ವಿದ್ಯಾಸಂಸ್ಥೆಯ ವಿ.ಕೆ.ಶಂಕರಪ್ಪ ಗುರುತಿನ ಚೀಟಿಗಳನ್ನು ವಿತರಿಸುತ್ತಿರುವುದು ಪುಣ್ಯದ ಕೆಲಸ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಸವೇಶ್ವರ ವಿದ್ಯಾಸಂಸ್ಥೆ ಅಧ್ಯಕ್ಷೆ ಪ್ರಭಾವತಿ ಶಂಕರಪ್ಪ ಮಾತನಾಡುತ್ತ ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವವರ ಸಂಖ್ಯೆ ಕಡಿಮೆಯಾಗುತ್ತಿದೆ. ವಯಸ್ಸಾದ ತಂದೆ-ತಾಯಿಗಳ ಪೋಷಿಸದ ಮಕ್ಕಳು ಕೊನೆಗಾಲದಲ್ಲಿ ವೃದ್ದಾಶ್ರಮಕ್ಕೆ ಸಾಗಿಸಿ ಜವಾಬ್ದಾರಿಯಿಂದ ನುಣುಚಿಕೊಳ್ಳುವುದನ್ನು ನೋಡಿದ್ದೇವೆ. ಸಣ್ಣ ಸಣ್ಣ ವಿಚಾರಗಳಿಗೂ ಎಲ್ಲರ ಮನೆಯಲ್ಲಿಯೂ ಜಗಳವಾಗುವುದು ಸಹಜ. ಹಾಗಂತ ಹಿರಿಯರನ್ನು ದೂಷಿಸುವುದು ಸರಿಯಲ್ಲ ಎಂದರು.

ಚಾರ್ಟೆಡ್ ಅಕೌಂಟೆಂಟ್ ಈ.ಚಂದ್ರಣ್ಣ ಮಾತನಾಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...