Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಳ ಮೀಸಲಾತಿ ವಿಳಂಬ : ಸರ್ಕಾರದ ವಿರುದ್ದ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ. 29 : ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಒಳ ಮೀಸಲಾತಿಯನ್ನು ಜಾರಿಗೊಳಿಸುವಲ್ಲಿ ವಿಳಂಭ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಪ್ಪ ಒಳ ಮೀಸಲಾತಿ ಜಾರಿಗಾಗಿ ಮೂರು ನಾಲ್ಕು ದಶಕಗಳಿಂದ ಮಾದಿಗ ಸಮುದಾಯಗಳು ನಡೆಸಿದ ಹೋರಾಟದ ಫಲವಾಗಿ ಕಳೆದ ಆ.1 ರಂದು ಸುಪ್ರಿಂಕೋರ್ಟ್ ಒಳ ಮೀಸಲಾತಿಯನ್ನು ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎನ್ನುವ ಮಹತ್ತರ ತೀರ್ಪು ನೀಡಿದ್ದರೂ ಸಹ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ದತ್ತಾಂಶಗಳ ನೆಪ ಹೇಳಿಕೊಂಡು ಕಾಲಹರಣ ಮಾಡುತ್ತಿದ್ದಾರೆ. ನಾಗಮೋಹನ್‍ದಾಸ್ ವರದಿಗೆ ಕಾಯುವ ಬದಲು ಸುಪ್ರೀಂಕೋರ್ಟ್ ತೀರ್ಪಿನಂತೆ ಒಳ ಮೀಸಲಾತಿಯನ್ನು ಜಾರಿಗೊಳಿಸದಿದ್ದರೆ ಮುಂದಿನ ದಿನಗಳಲ್ಲಿ ಘೇರಾವ್ ಹಾಕಲಾಗುವುದೆಂದು ಎಚ್ಚರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ ಮೀಸಲಾತಿಯನ್ನು ಜಾರಿಗೆ ತರುತ್ತಾರೆಂಬ ನಂಬಿಕೆಯಲ್ಲಿದ್ದೆವು. ಕಾಂಗ್ರೆಸ್ ಸರ್ಕಾರ ಮಾದಿಗರ ಪರವಾಗಿಲ್ಲ. ರಾಜಕಾರಣಿಗಳ ನಿಜ ಬಣ್ಣ ಈಗ ಬಯಲಾಗುತ್ತಿದೆ. ಇನ್ನು ನಾವುಗಳು ಭರವಸೆಯಿಟ್ಟುಕೊಂಡು ಸುಮ್ಮನೆ ಕುಳಿತುಕೊಳ್ಳುವುದರಲ್ಲಿ ಅರ್ಥವಿಲ್ಲ. ಉಗ್ರ ಹೋರಾಟಕ್ಕೆ ಸಜ್ಜಾಗಿದ್ದೇವೆಂದರು.

ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ ಮೀಸಲಾತಿಯನ್ನು ಜಾರಿಗೆ ತರಬೇಕು. ಇಲ್ಲಿಯವರೆಗೂ ಆಳಿದ ಎಲ್ಲಾ ಸರ್ಕಾರಗಳು ಮಾದಿಗ ಸಮುದಾಯವನ್ನು ವಂಚಿಸಿಕೊಂಡು ಬರುತ್ತಿವೆ. ತಕ್ಷಣವೆ ರಾಜ್ಯ ಸರ್ಕಾರ ಒಳ ಮೀಸಲಾತಿಯನ್ನು ಅನುಷ್ಟಾನಕ್ಕೆ ತರಬೇಕು. ಇಲ್ಲದಿದ್ದರೆ ಕುರ್ಚಿ ಖಾಲಿ ಮಾಡುವತನಕ ನಮ್ಮ ಹೋರಾಟ ನಿಲ್ಲುವುದಿಲ್ಲ. ಮುಂದೆ ಮುಖ್ಯ ಮಂತ್ರಿ ಮನೆಗೆ ಮುತ್ತಿಗೆ ಹಾಕಲು ಎಲ್ಲಾ ಮಾದಿಗ ಸಮುದಾಯದ ಸಂಘಟನೆಗಲು ಸಿದ್ದವಾಗಿವೆ ಎಂದರು.

ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟ ರಾಜ್ಯ ಕಾರ್ಯದರ್ಶಿ ಶಿವಮೂರ್ತಿ ಭೀಮನಕೆರೆ ಮಾತನಾಡುತ್ತ ಪರಿಶಿಷ್ಟ ಜಾತಿಯಲ್ಲಿನ 101 ಉಪ ಜಾತಿಗಳಿಗೆ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಗೆ ಹೂವು ಮುಡಿಸುವ ಕೆಲಸ ಮಾಡುವುದನ್ನು ಬಿಟ್ಟು ತಕ್ಷಣದಿಂದಲೆ ಒಳ ಮೀಸಲಾತಿಯನ್ನು ಜಾರಿಗೆ ತರಬೇಕು. ಅವೈಜ್ಞಾನಿಕ ಆಯೋಗ ರಚಿಸಿರುವುದರಿಂದ ಮಾದಿಗ ಸಮುದಾಯಗಳಿಗೆ ಯಾವುದೇ ಪ್ರಯೋಜನವಿಲ್ಲ. ಮೂರು ತಿಂಗಳೊಳಗೆ ಒಳ ಮೀಸಲಾತಿಯನ್ನು ಜಾರಿಗೆ ತರದಿದ್ದರೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಗಡುವು ನೀಡಿದರು.

ಒಳ ಮೀಸಲಾತಿ ಜಾರಿಯಾಗುವತನಕ 37 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿಯನ್ನು ತಡೆಹಿಡಿಯಬೇಕು. 49 ಅಲೆಮಾರಿಗಳನ್ನು ಪ್ರತ್ಯೇಕವಾಗಿ ಗುರುತಿಸಿ ಶೇ.1 ಕ್ಕಿಂತ ಹೆಚ್ಚು ಒಳ ಮೀಸಲಾತಿಯನ್ನು ನೀಡಿ ಪ್ರತ್ಯೇಕ ಅಭಿವೃದ್ದಿ ನಿಗಮ ಸ್ಥಾಪಿಸಬೇಕು. ಎಸ್ಸಿ.ಪಿ. ಟಿ.ಎಸ್ಪಿ. ಅನುದಾನದಲ್ಲಿ ಮಾದಿಗ, ಸಮಗಾರ, ಡೋಹರ, ಮಚಗಾರ

ಜಾತಿಗಳ ಜನಸಂಖ್ಯೆಯ ಆಧಾರದ ಮೇಲೆ ಪ್ರತ್ಯೇಕ ಅನುದಾನ ಮೀಸಲಿಟ್ಟು ವೆಚ್ಚ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಮಾದಿಗ ಸಮುದಾಯಗಳ ಸ್ವಾಭಿಮಾನ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಸುಂದರೇಶ್, ಕೆ.ಎನ್.ದೊಡ್ಡೊಟ್ಟೆಪ್ಪ, ಲಕ್ಷ್ಮಮ್ಮ, ನವೀದ್, ಮಹಾಂತೇಶ್ ಕೂನಬೇವು

ಕೆ.ಪಿ.ಶ್ರೀನಿವಾಸ್, ಜಿಲ್ಲಾಧ್ಯಕ್ಷ ಎನ್.ಪ್ರಕಾಶ್, ಮಹಾಲಿಂಗಪ್ಪ, ಹನುಮಂತರಾಜು, ಹೆಚ್.ಆರ್.ಶ್ರೀನಿವಾಸ್, ಹನುಮಂತರಾಯ, ಶಿವಮ್ಮ, ರಾಮಸ್ವಾಮಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...