Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈತರಿಗೆ ಸಿಹಿ ಸುದ್ದಿ : ಬೆಂಬಲ ಬೆಲೆ ಯೋಜನೆಯಡಿ ಕಡಲೆ ಕಾಳು ಖರೀದಿ

---Advertisement---

ಬಳ್ಳಾರಿ: ಕಡಲೆ ಕಾಳು ಬೆಎಯನ್ನು ಬೆಂಬಲ ಬೆಲೆಗೆ ಖರೀದಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಕರ್ನಾಟಕ ಸರ್ಕಾರದ ಪ್ರಸ್ತಾವನೆಯಂತೆ ರಾಜ್ಯದಲ್ಲಿ 2024-25ರ ಹಿಂಗಾರು ಬೆಳೆ ಯೋಜನೆಯಡಿ ಕಡಲೆಕಾಳು ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡುವುದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಭಾರತ ಸರ್ಕಾರದ ಕೃಷಿ ಸಚಿವಾಲಯ 96,498 ಮೆಟ್ರಿಕ್ ಟನ್ ಕಡಲೆ ಕಾಳು ಖರೀದಿ ಮಾಡಲು ಅನುಮತಿ ನೀಡಿದ್ದು, ಬೆಂಬಲ ಬೆಲೆಯನ್ನು ಘೋಷಣೆ ಮಾಡಿದೆ.

ಕೇಂದ್ರ ಸರ್ಕಾರವು ಕಡಲೆ ಕಾಳು ಉತ್ಪನ್ನಕ್ಕೆ ನಿಗದಿಪಡಿಸಿರುವ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ ಗೆ 5,650 ರೂಪಾಯಿ. ಇದೀಗ ರೈತರಿಂದ ಇದೆ ದರದಲ್ಲಿಯೇ ಖರೀದಿಸಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ‌‌. ಅರ್ಹ ಹಾಗೂ ಆಸಕ್ತ ರೈತರು ನೋಂದಣಿ ಮಾಡಿಕೊಳ್ಳಬಹುದಾಗಿದೆ. ನೋಂದಣಿ ಮಾಡಿಕೊಳ್ಳ ಹಲವು ದಾಖಲೆಗಳ ಅಗತ್ಯವಿದೆ. ಕಡಲೆ ಕಾಳು ಬೆಳೆಯನ್ನು ಮಾರಾಟ ಮಾಡಲು ಬಯಸುವ ರೈತರು, ಆಧಾರ್ ಕಾರ್ಡ್ ಹೊಂದಿರುವುದು ಕಡ್ಡಾಯ. ಪ್ತಸಕ್ತ ವರ್ಷದ ಪಹಣಿ ಪತ್ರ, ಎಫ್ಐಡಿ ಕಡ್ಡಾಯವಾಗಿದೆ.

ನೋಂದಣಿ ಸಮಯದಲ್ಲಿ ರೈತರು ಬ್ಯಾಂಕ್ ಖಾತೆ ಪುಸ್ತಕದ ನಕಲಿ ಪ್ರತಿಯನ್ನು ತೆಗೆದುಕೊಂಡು ಹೋಗಬೇಕು. ರೈತರು ತಮ್ಮ ಹೆಸರನ್ನು ಫ್ರೂಟ್ಸ್ ಫಲಿತಾಂಶದಲ್ಲಿ ನೊಂದಣಿ ಮಾಡಬೇಕು. ರೈತರಲ್ಲಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಫ್ರೂಟ್ಸ್‌ನಲ್ಲಿ ಯಾವುದಾದರೂ ತಾಂತ್ರಿಕ ದೋಷವಿದ್ದಲ್ಲಿ ಕೃಷಿ ಇಲಾಖೆ ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆಯಬಹುದು. ಒಣಗಿದ ಹಾಗೂ ಸ್ವಚ್ಛ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಕೇಂದ್ರಕ್ಕೆ ಮಾರಾಟ ಮಾಡಲು ತರಬೇಕು. ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಹಾಗೂ ನೋಂದಣಿ ಚೀಟಿ ಪಡೆಯಬೇಕು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...