Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೈಕ್ರೋ ಫೈನಾನ್ಸ್ ಕಿರುಕುಳ : ಹೊಸ ಬಿಲ್ ಗೆ ಸರ್ಕಾರ ಒಪ್ಪಿಗೆ

---Advertisement---

ಬೆಂಗಳೂರು: ರಾಜ್ಯದೆಲ್ಲೆಡೆ ಮೈಕ್ರೋ ಫೈನಾನ್ಸ್ ಕಿರುಕುಳ ಮಿತಿಮೀರಿದೆ. ಸಾಕಷ್ಟು ಜನ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಈ ಸಂಬಂಧ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಒಂದು ರೌಂಡ್ ಸಭೆ ನಡೆದಿತ್ತು. ಆದರೆ ಆಮೇಲೂ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳವೇನು ನಿಂತಿರಲಿಲ್ಲ. ಹೀಗಾಗಿ ಇಂದು ಮತ್ತೆ ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸಿದ್ದು, ಹೊಸ ಬಿಲ್ ಗೆ ಒಪ್ಪಿಗೆ ನೀಡಲಾಗಿದೆ.

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸಿದ್ದರಾಮಯ್ಯ ಸರ್ಕಾರ ಕಡಿವಾಣ ಹಾಕುವ ಕಾನೂನು ತರಲು ಮುಂದಾಗಿದೆ. ಇಂದು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಹೊಸ ಬಿಲ್ ಗೆ ಒಪ್ಪಿಗೆ ನೀಡಲಾಗಿದೆ. ಡ್ರಾಫ್ಟ್ ಬಗ್ಗೆಯೂ ಗಂಭೀರ ಮಾತುಕತೆ ನಡೆಸಲಾಗಿದೆ. ಜೊತೆಗೆ ಇದಕ್ಕೆ ಸುಗ್ರೀವಾಜ್ಞೆ ತರದೆ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.

ಸಚಿವ ಸಂಪುಟದ ಬಳಿಕ ಮಾತನಾಡಿದ ಹೆಚ್.ಕೆ.ಪಾಟೀಲ್, ರೈತರು, ಕಾರ್ಮಿಕರು ಚಿಕ್ಕ ಅತಿ ಚಿಕ್ಕ ವ್ಯಾಪಾರಿಗಳು, ಬೀದಿ ಬದಿ ವ್ಯಾಪಾರಿಗಳು ಸಾಲ ತೆಗೆದುಕೊಂಡಿದ್ದಾರೆ. ಆ ಸಾಲ ವಸೂಲಿ ಪ್ರಕ್ರಿಯೆ ನಡೆಯುತ್ತಿರೋದನ್ನ ಒಪ್ಪದಂತೆ ಆಗುತ್ತಾ ಇದೆ. ಮೈಕ್ರೋ ಫೈನಾನ್ಸ್ ಸಾಲಗಳಿಂದ ಜನರು ಬಹಳ ತೊಂದರೆಗೆ ಬಂದಿದ್ದಾರೆ. ಅಮಾನವೀಯವಾಗಿ ಸಾಲ, ಬಡ್ಡಿ ವಸೂಲಿ ಮಾಡುತ್ತಾ ಇದ್ದಾರೆ. ಸರ್ಕಾರ ಅದಕ್ಕಾಗಿ ಹೊಸ ಮಸೂದೆ ತರುತ್ತಾ ಇದೆ. ನಾವೂ ಚರ್ಚೆ ಮಾಡಿದ್ದೇವೆ. ತಾಂತ್ರಿಕ ಕಾರಣದಿಂದ ಇವತ್ತು ಸಂಜೆ ಕೂಡ ಸಿಎಂ ಸಿದ್ದರಾಮಯ್ಯ ಅವರು ಹಿರಿಯ ಸಚಿವರ ಸಭೆ ಕರೆದಿದ್ದಾರೆ. ಹೊಸ ಬಿಲ್ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು ಸಿಎಂ ಅಧಿಕಾರ ನೀಡಿದ್ದೇವೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment