Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಹಾಗೂ ಕಾಂತರಾಜ್ ವರದಿಯನ್ನು ಶೀಘ್ರ ಜಾರಿಗೆ ತರುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಒನಕೆ ಓಬವ್ವ ವೃತ್ತದ ಸಮೀಪ ಗುರುವಾರದಿಂದ ಅಮರಣಾಂತ ಸತ್ಯಾಗ್ರಹ ಆರಂಭಿಸಲಾಗಿದೆ.

ನಗರದಲ್ಲಿನ ಮುಖ್ಯ ರಸ್ತೆಗಳ ಅಗಲೀಕರಣ, ವಸತಿ ರಹಿತರಿಗೆ ನಿವೇಶನ/ಮನೆಗಳನ್ನು ಕಲ್ಪಿಸುವುದು. ಸರ್ಕಾರದ ಜಮೀನನ್ನು ಅಕ್ರಮವಾಗಿ ಸಾಗುವಳಿ ಮಾಡುತ್ತಿರುವುದನ್ನು ಸಕ್ರಮಗೊಳಿಸಿ ಹಕ್ಕುಪತ್ರ ನೀಡುವಂತೆ ಧರಣಿ ನಿರತರು ಸರ್ಕಾರವನ್ನು ಒತ್ತಾಯಿಸಿದರು.

ಸತ್ಯಾಗ್ರಹದ ನೇತೃತ್ವ ವಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಸಿ.ಹೆಚ್.ಮಂಜುನಾಥ್ ಮಾತನಾಡಿ ಸದಾಶಿವ ಆಯೋಗ ಹಾಗೂ ಕಾಂತರಾಜ್ ಆಯೋಗದ ವರದಿ ಸಲ್ಲಿಕೆಯಾಗಿ ಹತ್ತದಿನೈದು ವರ್ಷಗಳು ಕಳೆದಿದ್ದರೂ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೆ ತರುವಲ್ಲಿ ಹಿಂದೇಟು ಹಾಕುತ್ತಿದೆ. ಜಾತಿ ಜನಗಣತಿ ನಡೆಸುವಲ್ಲಿ ಎಲ್ಲಾ ಪಕ್ಷಗಳು ವಿಫಲವಾಗಿದ್ದು, ಅಸ್ಪøಶ್ಯರು, ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಲೆ ಬರುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಳ ಮೀಸಲಾತಿಯನ್ನು ಶೀಘ್ರವೇ ಅನುಷ್ಠಾನಕ್ಕೆ ತರದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.

ಐತಿಹಾಸಿಕ ಪ್ರಸಿದ್ದಿ ಪಡೆದಿರುವ ಚಿತ್ರದುರ್ಗದಲ್ಲಿ ರಸ್ತೆಗಳು ಕಿಷ್ಕಿಂದೆಯಾಗಿರುವುದರಿಂದ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ. ಚಳ್ಳಕೆರೆ ಟೋಲ್‍ಗೇಟ್‍ನಿಂದ ಹಿಡಿದು ಗಾಂಧಿವೃತ್ತದ ಮೂಲಕ ಹೊಳಲ್ಕೆರೆ, ದಾವಣಗೆರೆ ಹಾಗೂ ಮೆದೇಹಳ್ಳಿ ರಸ್ತೆಗಳನ್ನು ಅಗಲೀಕರಣಗೊಳಿಸಬೇಕು. ಅನಾದಿ ಕಾಲದಿಂದಲೂ ಜೀವನೋಪಾಯಕ್ಕಾಗಿ ಪರಿಶಿಷ್ಟ ಜಾತಿ, ವರ್ಗದವರು ಸರ್ಕಾರಿ ಜಮೀನು ಸಾಗುವಳಿ ಮಾಡುತ್ತಿದ್ದಾರೆ. ಅಂತಹ ಸಾಗುವಳಿದಾರರನ್ನು ಸಕ್ರಮಗೊಳಿಸಿ ಸಾಗುವಳಿ ಪತ್ರ ನೀಡಬೇಕು. ಅರಣ್ಯ ಇಲಾಖೆಯವರು ಸಾಗುವಳಿ ಮಾಡುತ್ತಿರುವವರನ್ನು ಬೆದರಿಸಿ ಒಕ್ಕಲೆಬ್ಬಿಸುತ್ತಿರುವುದು ನಿಲ್ಲಬೇಕೆಂದು ಸಿ.ಹೆಚ್.ಮಂಜುನಾಥ್ ಒತ್ತಾಯಿಸಿದರು.

ಇನಾಯತ್, ದಾದಾಪೀರ್, ಓ.ಬಸವರಾಜ್, ಹೊನ್ನೂರಪ್ಪ, ಶಿವಣ್ಣ, ಕೃಷ್ಣಪ್ಪ, ರಂಗಸ್ವಾಮಿ, ರಜಿಯಾಬೇಗಂ, ಪ್ಯಾರಿಮ, ವಿಜಯಲಕ್ಷ್ಮಿ, ಕೈರುನ್, ಪರ್ವಿನ್, ರಾಮಣ್ಣ, ತಿಪ್ಪಮ್ಮ, ವೆಂಕಟೇಶ್, ಮಸ್ಕಾನ್, ಶಾಹಿನ, ರೇಷ್ಮ, ಮೆಹಬೂಬಿ, ಮಮ್ತಾಜ್ ಇನ್ನು ಅನೇಕರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...