Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬ್ಯಾಂಕ್, ಅಂಚೆ ಕಚೇರಿಗಳಲ್ಲಿ ಕನ್ನಡ ಬಾರದ ಸಿಬ್ಬಂದಿ ನೇಮಕ : ವಿಜಯಸೇನೆ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಅಂಚೆ ಕಚೇರಿಗಳಲ್ಲಿ ಕನ್ನಡ ಮಾತನಾಡಲು ಬಾರದ ಸಿಬ್ಬಂದಿಗಳಿಂದ ಗ್ರಾಹಕರು ವ್ಯವಹರಿಸಲು ತೊಂದರೆಯಾಗುತ್ತಿರುವುದನ್ನು ವಿರೋಧಿಸಿ ಕರುನಾಡ ವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಬ್ಯಾಂಕ್ ಮತ್ತು ಅಂಚೆ ಕಚೇರಿಗಳಲ್ಲಿ ಹಿಂದಿ ಮತ್ತು ಇಂಗ್ಲಿಷ್‍ನಲ್ಲಿ ಮಾತನಾಡುವ ಸಿಬ್ಬಂದಿಗಳೆ ಜಾಸ್ತಿಯಿರುವುದರಿಂದ ಕನ್ನಡಿಗರು ವ್ಯವಹರಿಸಲು ಆಗದೆ ಪರದಾಡುವಂತಾಗಿದೆ. ಈ ಹಿಂದೆ ಸಾಕಷ್ಟು ಬಾರಿ ಬ್ಯಾಂಕ್ ಮತ್ತು ಅಂಚೆ ಕಚೇರಿಗಳ ಎದುರು ಪ್ರತಿಭಟನೆ ನಡೆಸಿ ಕನ್ನಡಿಗರನ್ನು ನೇಮಕ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದರೂ ಸಹ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕನ್ನಡಿಗರಿಗೆ ಅವಮಾನಿಸುತ್ತ ಬರುತ್ತಿರುವುದು ನೋವಿನ ಸಂಗತಿ. ರಾಷ್ಟ್ರೀಕೃತ ಬ್ಯಾಂಕ್‍ಗಳು ಮತ್ತು ಅಂಚೆ ಕಚೇರಿಗಳಲ್ಲಿ ಕೆಲಸ ಮಾಡುತ್ತಿರುವ ಹೊರ ರಾಜ್ಯಗಳ ಸಿಬ್ಬಂದಿಗಳಿಗೆ ಎರಡು ಮೂರು ಬಾರಿ ಕನ್ನಡ ಪುಸ್ತಕಗಳನ್ನು ನೀಡಿ, ಸಿಹಿ ತಿನ್ನಿಸಿ ಕನ್ನಡದಲ್ಲಿ ಮಾತನಾಡುವಂತೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಹಿಂದಿ, ಇಂಗ್ಲಿಷ್‍ನಲ್ಲಿರುವ ಚಲನ್‍ಗಳನ್ನು ಕನ್ನಡದಲ್ಲಿ ಮುದ್ರಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರತರನಾದ ಹೋರಾಟ ಮಾಡಲಾಗುವುದೆಂದು ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಎಚ್ಚರಿಸಿದರು.

ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಎಸ್. ತಾಲ್ಲೂಕು ಅಧ್ಯಕ್ಷ ಸಂತೋಷ್ ಎನ್. ನಗರಾಧ್ಯಕ್ಷ

ಅವಿನಾಶ್, ಜಿಲ್ಲಾ ಸಂಚಾಲಕ ನಾಗೇಶ್ ವಿ. ಹರೀಶ್‍ಕುಮಾರ್ ಪಿ.ಆರ್. ತಿಪ್ಪೇಸ್ವಾಮಿ ಸಿ. ಅಖಿಲೇಶ್ ನಾಯ್ಕ ಜಿ.ಪಿ.ನಿರಂಜನ್, ಎರ್ರಿಸ್ವಾಮಿ, ನಾಗರಾಜ, ಕಮಲ,
ನಿಸಾರ್ ಅಹಮದ್, ಕೆ.ರತ್ನಮ್ಮ, ಯುವ ಘಟಕದ ತಾಲ್ಲೂಕು ಅಧ್ಯಕ್ಷ ಮಧುಸೂದನ್ ಕೆ.ಎನ್. ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment