Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಇಂದಿನಿಂದ ಬಜೆಟ್ ಅಧಿವೇಶನ ಆರಂಭ

---Advertisement---

 

ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ರಾಷ್ಟ್ರಪತಿ ಭಾಷಣದ ಬಳಿಕ‌ ಸದನದಲ್ಲಿ ಆರ್ಥಿಕ ಸಮೀಕ್ಷಾ ವರದಿ ಮಂಡನೆ ಆಗಲಿದೆ. ಇಂದಿನಿಂದ ಏಪ್ರಿಲ್ 4ರ ವರೆಗೆ ಎರಡು ಹಂತದಲ್ಲಿ ಬಜೆಟ್ ಅಧಿವೇಶನ ನಡೆಯಲಿದೆ. ಮೊದಲ ಹಂತದ ಅಧಿವೇಶನ ಇಂದಿನಿಂದ ಫೆಬ್ರವರಿ 14ರ ವರೆಗೆ ಹಾಗೂ ಎರಡನೇ ಹಂತದ ಅಧಿವೇಶನವೂ ಮಾರ್ಚ್ 10 ರಿಂದ ಏಪ್ರಿಲ್ 4ರ ವರೆಗೂ ನಡೆಯಲಿದೆ.

ನಾಳೆ ಅಂದ್ರೆ ಫೆಬ್ರವರಿ1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಾರಿ ಮೂರು ಹೊಸ ಕಾನೂನು ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಅದರಲ್ಲಿ 1) ವಕ್ಫ್ ತಿದ್ದುಪಡಿ ಮಸೂದೆ 2) ವಿಮಾನ ವಸ್ತುಗಳ ಮೇಲಿನ ಹಿತಾಸಕ್ತಿಗಳ ರಕ್ಷಣಾ ಮಸೂದೆ 3) ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯ ಮಸೂದೆ 4) ವಲಸೆ ಹಾಗೂ ವಿದೇಶಿ ಮಸೂದೆ ಕಾನೂನನ್ನು ಮಂಡಿಸಲಿದೆ.

ಜೊತೆಗೆ ವಿಪಕ್ಷಗಳು ಕೇಂದ್ರ ಆಡಳಿತ ಸರ್ಕಾರದ ಮೇಲೆ ಹರಿಹಾಯಲು ಒಂದಷ್ಟು ಯೋಜನೆ ರೂಪಿಸಿಕೊಂಡಿವೆ. ಅದರಲ್ಲಿ ಕುಂಭಮೇಳದಲ್ಲಿ ಕಾಲ್ತುಳಿತ ಆಗಿದ್ದು, ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ, ರೈತರ ಸಮಸ್ಯೆ, ಒಂದು ದೇಶ ಒಂದು ಎಲೆಕ್ಷನ್, ವಕ್ಫ್ ತಿದ್ದುಪಡಿ ಕಾಯ್ದೆ ವಿವಾದಗಳನ್ನು ಮುಂದಿಟ್ಟುಕೊಂಡು ಚರ್ಚೆಗೆ ಇಳಿಯಲಿದೆ ಎನ್ನಲಾಗಿದೆ. ಇದನ್ನ ಹೊರತುಪಡಿಸಿದರೆ ಮೋದಿಯವರು ಮೂರನೇ ಬಾರಿಗೆ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ್ದಾರೆ. ಹೀಗಾಗಿ ಎಲ್ಲಾ ರಾಜ್ಯಗಳು ಒಂದಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಜನರಿಗೆ ಬೇಕಾದ್ದನ್ನು ಯಾವ ಮಟ್ಟಕ್ಕೆ ನೀಡುತ್ತಾರೆ ಎಂಬುದನ್ನು ನೋಡಬೇಕಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...