Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಳ್ಳಂಬೆಳಗ್ಗೆ ಚಿತ್ರದುರ್ಗ ಸೇರಿದಂತೆ ಹಲವೆಡೆ ಲೋಕಾಯುಕ್ತರಿಂದ ದಾಳಿ..!

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ.

ಬೆಂಗಳೂರು, ರಾಯಚೂರು, ಬಾಗಲಕೋಟೆ, ಚಿತ್ರದುರ್ಗ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ. ರಾಜ್ಯಾದ್ಯಂತ ಏಳು ಕಡೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಎರಡು ಕಡೆ, ಬೆಳಗಾವಿಯಲ್ಲಿ ಎರಡು ಕಡೆ, ಚಿತ್ರದುರ್ಗ, ರಾಯಚೂರು ಹಾಗೂ ಬಾಗಲಕೋಟೆಯಲ್ಲಿ ತಲಾ ಒಂದೊಂದು ಕಡೆ ದಾಳಿ ನಡೆದಿದೆ.

ಚಿತ್ರದುರ್ಗದಲ್ಲಿ ಬಿಸಿಎಂ ಇಲಾಖೆಯ ಮ್ಯಾನೇಜರ್,
ಬಾಗಲಕೋಟೆಯಲ್ಲಿ ಗ್ರಾಮ ಪಂಚಾಯತ್ ಪಿಡಿಒ,
ರಾಯಚೂರಿನಲ್ಲಿ ಜಿಲ್ಲಾ ಪಂಚಾಯತ್ ಲೆಕ್ಕಪತ್ರ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಮಾಡಿರುವ ಸಂಬಂಧ ರಾಯಚೂರು ಹಾಗೂ ಬಾಗಲಕೋಟೆಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ಸಂಬಂಧ ಇಂದು ಲೋಕಾಯುಕ್ತ ಅಧಿಕಾರಿಗಳು ಬೆಳಗ್ಗೆಯೇ ದಾಳಿ ನಡೆಸಿ, ದಾಖಲೆಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಗಳಿಕೆ ಮಾಡಿದ್ದು ಹೇಗೆ ಎಂಬುದರ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ.

ರಾಯಚೂರು ನಗರದ ದೇವರ ಕಾಲೋನಿಯಲ್ಲಿರುವ ಜಿಲ್ಲಾ ಪಂಚಾಯತ್ ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗ್ ರಾವ್ ಗುಜ್ಜರ್ ಮನೆ ಮೇಲೆ ದಾಳಿ ಮಾಡಲಾಗಿದೆ. ಇವರು ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿರುವ ದೂರು ಬಂದಿರುವುದರಿಂದ ಈ ದಾಳಿ ನಡೆಸಲಾಗಿದೆ. ಬಾಗಲಕೋಟೆಯ ವಿದ್ಯಾಗಿರಿಯ 22ನೇ ಕ್ರಾಸ್ ನಲ್ಲಿರುವ ಪಿಡಿಒ ಬಿಎಸ್ ಹಿರೇಮಠ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಪಿಡಿಒ ಆಗಿರುವ ಹಿರೇಮಠ ಆದಾಯಕ್ಕಿಂತ ಹೆಚ್ಚು ಹಣ ಗಳಿಸಿದ್ದಾರೆ ಎಂಬ ದೂರು ಬಂದಿತ್ತು. ಬಿ.ಎಸ್ ಹಿರೇಮಠ ಬಾದಾಮಿ ವಿದ್ಯಾಗಿರಿಯ ನಿವಾಸ ಅಲ್ಲದೇ ನರಗುಂದದ ತಾಲೂಕಿನಲ್ಲೂ ಐಷಾರಾಮಿ ನಿವಾಸ ಹೊಂದಿದ್ದಾರೆ. ಇದರ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಾಣಕ್ಯನೀತಿ : ಬುದ್ಧಿವಂತಿಕೆ ಇದ್ದರೂ ಈ 5 ತಪ್ಪು ಮಾಡಬೇಡಿ; ಜೀವನದಲ್ಲಿ ಕಷ್ಟಗಳು ಎದುರಾಗಬಹುದು!

ಆಗಸ್ಟ್ 17ರ ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಶುಭಫಲ, ಹಣಕಾಸಿನಲ್ಲಿ ಲಾಭದ ಯೋಗ!

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

Leave a Comment