Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಯಾಮರಣಕ್ಕೆ ಸರ್ಕಾರದಿಂದ ಅಸ್ತು : ಅನುಮತಿ ಪ್ರಕ್ರಿಯೆ ಹೀಗೆ..!

---Advertisement---

ಬೆಂಗಳೂರು: ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಾ ಇದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿರುವವರಿಗೆ, ಘನತೆಯಿಂದ ಸಾಯುವ ಹಕ್ಕನ್ನು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಆದೇಶವನ್ನು ಹೊರಡಿಸಿದೆ. ಅಂದ್ತೆ ದಯಾಮರಣಕ್ಕೆ ಸರ್ಕಾರ ಅಸ್ತು ಎಂದಿದೆ. ಮಾರಕ ರೋಗದಿಂದ ಬಳಲುತ್ತಿರುವವರಿಗೆ ಸಾಯುವ ಹಕ್ಕನ್ನು ನೀಡುವ ಮೂಲಕ ಕರ್ನಾಟಕ ಆರೋಗ್ಯ ಇಲಾಖೆಯೂ ಸುಪ್ರೀಂ ಕೋರ್ಟ್ ನ ನಿರ್ದೇಶನವನ್ನು ಜಾರಿ ಮಾಡಿದಂತಾಗಿದೆ.

ದಯಾಮರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಏನು ಹೇಳಿತ್ತು, ತಾವೂ ನರ್ಸ್ ಆಗಿ ಕೆಲಸ ಮಾಡುತ್ತಿದ್ದಂತ ಆಸ್ಪತ್ರೆಯಲ್ಲಿಯೇ ಸರಿಸುಮಾರು 42 ವರ್ಷಗಳ ಕಾಲ ಜೀವಚ್ಛವದಂತೆ ಬದುಕಿದ ಅರುಣಾ ಶಾನಭಾಗ್ ಅವರ ದಯಾಮರಣ ಅರ್ಜಿಯ ಕುರಿತ ತೀರ್ಪಿನ ವೇಳೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿತ್ತು. ದಯಾಮರಣ ನೀಡುವ ವಿಚಾರವಾಗಿ ಮಾರ್ಗದರ್ಶಕ ಸೂತ್ರಗಳನ್ನು ರೂಪಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಇದೀಗ ಅದನ್ನು ಆರೋಗ್ಯ ಇಲಾಖೆ ಪಾಲಿಸಿದೆ.

ದಯಾಮರಣಕ್ಕೆ ಅವಕಾಶ ನೀಡುವುದನ್ನು ನಿರ್ಧರಿಸುವುದನ್ನು ಇಬ್ಬರು ವೈದ್ಯರನ್ನೊಳಗೊಂಡ ಎರಡು ಮಂಡಳಿಗಳ ಸ್ಥಾಪನೆ ಮಾಡುವ ಬಗ್ಗೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಗಂಭೀರವಾದ ಮತ್ತು ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಕುಟುಂಬಸ್ಥರ ಮನವಿ ಮೇರೆಗೆ ವೈದ್ಯರ ತಂಡ ಕಾರ್ಯ ನಿರ್ವಹಿಸಬೇಕು. ಇದಕ್ಕಾಗಿ ಎರಡು ಪ್ರೈಮರಿ ಹಾಗೂ ಸೆಕೆಂಡರಿ ಎಂಬ ಎರಡು ವೈದ್ಯರ ಬೋರ್ಡ್ ಗಳನ್ನ ಸ್ಥಾಪಿಸಲಾಗುತ್ತಿದೆ. ಪ್ರೈಮರಿ ಬೋರ್ಡ್ ನಲ್ಲಿ ಮೂವರು ವೈದ್ಯರು ಇರುತ್ತಾರೆ. ಸೆಕೆಂಡರಿ ಬೋರ್ಡ್‌ನಲ್ಲಿ ಕೂಡ ಮೂವರು ವೈದ್ಯರು ಇರಲಿದ್ದಾರೆ. ಈ ಪೈಕಿ ಒಬ್ಬ ಸರ್ಕಾರಿ ವೈದ್ಯರು ಇರಲಿದ್ದಾರೆ. ರೋಗಿಯ ಕುಟುಂಬದವರು ಮಾಡಿದ ವರದಿಯನ್ನು ಮೊದಲು ಪ್ರೈಮರಿ ಬೋರ್ಡ್ ಪರಿಶೀಲನೆ ನಡೆಸುತ್ತಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...