Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತೆಗೆಯುವಲ್ಲಿ ಚಿತ್ರಕಲಾ ಪ್ರದರ್ಶನಗಳು ಉಪಯುಕ್ತ : ಬಿಇಒ ಎಸ್.ನಾಗಭೂಷಣ್  

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಹೊರತೆಗೆಯುವಲ್ಲಿ ಚಿತ್ರಕಲಾ ಪ್ರದರ್ಶನಗಳು ಉಪಯುಕ್ತವಾಗಲಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ತಿಳಿಸಿದರು.

ಡಾನ್‍ಬೋಸ್ಕೋ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಚಿತ್ರಕಲಾ ಪ್ರದರ್ಶನ ವೀಕ್ಷಿಸಿ ನಂತರ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಮಕ್ಕಳಲ್ಲಿ ಚಿತ್ರಕಲೆ ಪ್ರವೃತ್ತಿಯನ್ನು ಬೆಳೆಸಲು ಚಿತ್ರಕಲಾ ಪ್ರದರ್ಶನಗಳು ಅತ್ಯುತ್ತಮ ವೇದಿಕೆ. ಇದರ ಪ್ರಯೋಜನ ಪಡೆದುಕೊಂಡು ಮಕ್ಕಳು ತಮ್ಮಲ್ಲಿರುವ ಕಲೆಯನ್ನು ಅರಳಿಸಬೇಕು. ಚಿತ್ರಕಲೆ ವಿಶ್ವ ಭಾಷೆಯಾಗಿರುವುದರಿಂದ ಯಾರು ಬೇಕಾದರೂ ಸುಲಭವಾಗಿ ಅರ್ಥಮಾಡಿಕೊಳ್ಳಬಹುದೆಂದರು.

ಚಿತ್ರಕಲಾ ಶಿಕ್ಷಕ ಪ್ರಸನ್ನಕುಮಾರ್ ಮಾತನಾಡಿ ಚಿತ್ರಕಲೆ ಮನುಷ್ಯನ ಭಾವನೆಗಳ ಪ್ರತೀಕ ಎಂದು ಹೇಳಿದರು.
ಚಿತ್ರಕಲಾ ಶಿಕ್ಷಕ ವೆಂಕಟೇಶ್, ಡಾನ್‍ಬೋಸ್ಕೋ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲರಾದ ಫಾದರ್ ಉದಯ್‍ಕುಮಾರ್, ಫಾದರ್ ಮ್ಯಾಥ್ಯು, ಫಾದರ್ ಜಾನ್‍ಪಾಲ್, ನಿರ್ದೇಶಕ ಫಾದರ್ ಸಜ್ಜಿಜಾರ್ಜ್ ಈ ಸಂದರ್ಭದಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment