ಚಿತ್ರದುರ್ಗ. ಜ.31: ಇತ್ತೀಚಿಗೆ ಮೈಕ್ರೋಫೈನಾನ್ಸ್, ಲೇವಾದೇವಿ, ಗಿರವಿ ಹಣಕಾಸು ಸಂಸ್ಥೆಗಳಿಂದ ತನ್ನ ಸಾಲಗಾರರಿಗೆ ಅತಿಯಾಗಿ ಬಡ್ಡಿ ವಿಧಿಸುತ್ತಿರುವುದು ಹಾಗೂ ಸಾಲ ವಸೂಲಾತಿ ಸಮಯದಲ್ಲಿ ಸಾಲಗಾರರಿಗೆ ಕಿರುಕುಳ ನೀಡುತ್ತಿರುವುದು ಕಂಡುಬಂದಿರುವುದರಿಂದ, ಈ ಬಗ್ಗೆ ಕ್ರಮ ಕೈಗೊಳ್ಳಲು ಫೆ.04ರಂದು ಸಂಜೆ 4ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳ ಸಭೆ ನಿಗಧಿಪಡಿಸಲಾಗಿದೆ.

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆಯ ಅಧ್ಯಕ್ಷತೆ ವಹಿಸುವರು. ಸಭೆಗೆ ಚಿತ್ರದುರ್ಗ ಜಿಲ್ಲೆಯಲ್ಲಿನ ಮೈಕ್ರೋಫೈನಾನ್ಸ್, ಲೇವಾದೇವಿ, ಗಿರವಿ ಹಣಕಾಸು ಸಂಸ್ಥೆಗಳ ವ್ಯವಸ್ಥಾಪಕರು ಸಂಪೂರ್ಣ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ಆರ್.ಎಸ್.ದಿಲೀಪ್ ಕುಮಾರ್ ತಿಳಿಸಿದ್ದಾರೆ.


