ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 01 : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶದ ಎಲ್ಲಾ ರಾಜ್ಯಗಳನ್ನು ಸಮಾನವಾಗಿ ಕಾಣಬೇಕೆಂಬ ಉದ್ದೇಶವಿಟ್ಟುಕೊಂಡು ಮಂಡಿಸಬೇಕಾಗಿದ್ದ ಕೇಂದ್ರ ಬಜೆಟ್‍ನಲ್ಲಿ ಬಿಹಾರಕ್ಕೆ ಹೆಚ್ಚಿನ ಒತ್ತು ನೀಡಿರುವುದನ್ನು ನೋಡಿದರೆ ಇದೊಂದು ಋಣ ತೀರಿಸುವ ಬಜೆಟ್ ಎನ್ನುವುದರಲ್ಲಿ ಅನುಮಾನವಿಲ್ಲ.
ಮಧ್ಯಕರ್ನಾಟಕದ ಬಯಲುಸೀಮೆ ಚಿತ್ರದುರ್ಗಕ್ಕೆ ಭದ್ರಾಮೇಲ್ದಂಡೆ ಯೋಜನೆ, ಕಾವೇರಿ, ಮೇಕೆದಾಟು ವಿವಾದ ಬಗ್ಗೆ ಬಜೆಟ್‍ನಲ್ಲಿ ಚಕಾರವೆತ್ತಿಲ್ಲ. ಇದೊಂದು ರೈತ ಹಾಗೂ ವಿದ್ಯಾರ್ಥಿಗಳ ಪಾಲಿಗೆ ನಿರಾಶದಾಯಕ ಬಜೆಟ್ ಎಂದರೆ ತಪ್ಪಾಗಲಾರದು.
ನರೇಂದ್ರಮೋದಿರವರು ಪ್ರಧಾನಿಯಾಗಲು ಬೆಂಬಲ ನೀಡಿದರೆಂಬ ಕಾರಣಕ್ಕಾಗಿ ಬಿಹಾರಕ್ಕೆ ಮೂಲಭೂತ ಸೌಕರ್ಯ, ವಿಶೇಷ ಅನುದಾನ ಘೋಷಿಸಿ ಬೇರೆ ರಾಜ್ಯಗಳನ್ನು ಕಡೆಗಣಿಸಿರುವುದು ಜನ ವಿರೋಧಿ ಬಜೆಟ್ ಎನ್ನುವುದು ಗೊತ್ತಾಗುತ್ತದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಕರ್ನಾಟಕದ ಪಾಲಿಗೆ
ಘನಘೋರ ಅನ್ಯಾಯವಾಗಿದೆ ಎಂದು ಸಾಮಾಜಿಕ ಚಿಂತಕ ಜೆ.ಯಾದವರೆಡ್ಡಿ ಕೇಂದ್ರ ಬಜೆಟ್‍ನ್ನು ವಿರೋಧಿಸಿದ್ದಾರೆ.