ಬೆಂಗಳೂರು: ಮುಖ್ಯಮಂತ್ರಿಗಳ ಸಲಹೆಗಾರರಾಗಿದ್ದ ಬಿ.ಆರ್.ಪಾಟೀಲ್ ಅವರು ತಮ್ಮ ಹುದ್ದೆಗೆ ನಿನ್ನೆ ರಾಜೀನಾಮೆ ನೀಡಿದ್ದಾರೆ. ಆದರೆ ನಿನ್ನೆ ರಾಜೀನಾಮೆ ನೀಡಿದ್ದೇಕೆ ಎಂಬ ವಿಚಾರವನ್ನು ಬಹಿರಂಗ ಪಡಿಸಿರಲಿಲ್ಲ. ಇದೀಗ ಆ ಬಗ್ಗೆ ಮಾತನಾಡಿದ್ದಾರೆ. ಜೊತೆಗೆ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ವಾಪಸ್ ತೆಗೆದುಕೊಳ್ಳಲ್ಲ ಎಂದು ತಿಳಿಸಿದ್ದಾರೆ.
ನಿನ್ನೆ, ಮೊನ್ನೆ ರಾಜೀನಾಮೆ ನೀಡಿದ್ದೇನೆ. ಸಿಎಂ ಸಿದ್ದರಾಮಯ್ಯ ಬಗ್ಗೆ ವಿವರವಾಗಿ ಪತ್ರದಲ್ಲಿ ಬರೆದಿದ್ದೇನೆ. ಸಿದ್ದರಾಮಯ್ಯ ಅವರು ಕರೆ ಮಾಡಿದರೆ ಅವರೊಂದಿಗೆ ಖಂಡಿತ ಮಾತನಾಡುತ್ತೇನೆ. ರಾಜೀನಾಮೆ ನೀಡುವುದಕ್ಕೆ ಹಲವು ಕಾರಣಗಳಿವೆ. ಅದೆಲ್ಲವನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಲು ಸಾಧ್ಯವಿಲ್ಲ. ಹಾಗೇ ನನ್ನ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ವಾಪಾಸ್ ಪಡೆಯುವುದಿಲ್ಲ. ಗ್ಯಾರಂಟಿ ಯೋಜನೆಗಳಿಂದಾಗಿ ನಮ್ಮ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ, ಅಲ್ಲದೆ ನಾನು ಸುಖಾಸುಮ್ಮನೆ ರಾಜೀನಾಮೆ ಕೊಟ್ಟಿಲ್ಲ. ಕೆಲವು ಸಮಸ್ಯೆಗಳು ಇರುವ ಕಾರಣದಿಂದ ನಾನು ರಾಜೀನಾಮೆ ನೀಡಿದ್ದೇನೆ. ಇನ್ನು ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿರುವುದು ವಿಶೇಷವೇನಲ್ಲ. ನಾನು ಮೊದಲೇ ರಾಜೀನಾಮೆ ಕೊಡಬೇಕಿತ್ತು. ಆದರೆ ಈಗ ರಾಜೀನಾಮೆ ನೀಡುವ ಸಂದರ್ಭ ಬಂದಿದೆ ಎಂದಿದ್ದಾರೆ.
ನಾನು ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಎರಡನೇ ಪತ್ರ ಬರೆದಿದ್ದೇನೆ. ಮುಡಾ ಕೇಸ್‌ನಿಂದಾಗಿ ಸಿದ್ದರಾಮಯ್ಯ ಅವರು ಸದ್ಯ ಬಹಳ ಒತ್ತಡದಲ್ಲಿದ್ದಾರೆ. ಕೊನೆವರೆಗೂ ನನ್ನೊಂದಿಗೆ ಇರುವುದಾಗಿ ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದಾಗಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಬರುತ್ತಿಲ್ಲ. ಇದರಿಂದ ನನಗೆ ಯಾವ ಅಸಮಾಧಾನವೂ ಇಲ್ಲ. ಸಚಿವ ಸ್ಥಾನ ಸಿಗದ ಕಾರಣ ಕೊನೆಗೆ ಕ್ಷೇತ್ರಕ್ಕಾದರೂ ಹೆಚ್ಚಿನ ಅನುದಾನ ಸಿಗುತ್ತದೆ ಎಂದು ನಿರೀಕ್ಷಿಸಿದ್ದರು. ಇದು ಸಾಧ್ಯವಾಗದ ಕಾರಣ ಅವರು ಮನನೊಂದು ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ