ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 03 : ನಗರದ ಕೆಳಗೋಟೆ ಚಿನ್ನಪ್ಪ ಲೇಔಟ್ ನಿವಾಸಿ, ಚಿತ್ರದುರ್ಗ ಜಿಲ್ಲಾ ರೆಡ್ಡಿ ಜನ ಸಂಘದ ವ್ಯವಸ್ಥಾಪಕ ಗೌಡರ ಜಿ.ಎನ್.ಹನು ಮಂತರೆಡ್ಡಿ(62) ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಭಾನುವಾರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆ ದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಅಂತ್ಯಕ್ರಿಯೆ ಮಂಗಳವಾರ ಸ್ವಗ್ರಾಮ,ಹಿರಿಯೂರು ತಾಲೂಕು ಮರಡಿಹಳ್ಳಿಯ ಅವರ ಜಮೀನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಾಪ : ರೆಡ್ಡಿ ಜನ ಸಂಘದಲ್ಲಿ ಸುಮಾರು 35 ಕ್ಕೂ ಹೆಚ್ಚು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಕಂಬನಿ ಮಿಡಿದಿದ್ದಾರೆ. ರೆಡ್ಡಿ ಜನಸಂಘದ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.