ನವದೆಹಲಿ: ಕೊರೊನಾ ವೈರಸ್ ರೂಪಾಂತರಿ ತಳಿ ಒಮಿಕ್ರಾನ್ ವೈರಸ್ ಈಗ ಎಲ್ಲೆಡೆ ಹೆಚ್ಚಾಗುತ್ತಿದೆ. ದೇಶದಲ್ಲಿ ಎರಡು ಪ್ರಕರಣ ಕಾಣಿಸಿಕೊಂಡಿದ್ದೆ ತಡ ಇದೀಗ ಒಂದರ ಹಿಂದೆ ಒಂದು ಕಾಣಿಸಿಕೊಂಡು ಐದು ಕೇಸ್ ಗೆ ಬಂದು ನಿಂತಿದೆ.
ದೇಶದಲ್ಲಜ ಒಟ್ಟು ಐದು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಅದರಲ್ಲಿ ಕರ್ನಾಟಕದಲ್ಲಿ ಎರಡು, ಗುಜರಾತ್ ನಲ್ಲಿ ಒಂದು, ಮುಂಬೈನಲ್ಲಿ ಒಂದು ಈಗ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಒಂದು ಕೇಸ್ ದಾಖಲಾಗಿದೆ.
ಸೋಂಕಿತರನ್ನ ಈಗಾಗಲೇ ಆಸ್ಪತ್ರೆಗಳಿಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಜೊತೆಗೆ ಸಂಪರ್ಕದಲ್ಲಿದ್ದವರನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಕೊರೊನಾ ವೈರಸ್ ಹೆಚ್ಚಾಗದಂತೆ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಅದರಲ್ಲೂ ರೂಪಾಂತರಿ ಓಮಿಕ್ರಾನ್ ಬಹಳ ವೇಗವಾಗಿ ಹರಡುವುದರಿಂದ ಸಾಕಷ್ಟು ಎಚ್ಚರಿಕೆಯಿಂದ ಇರಬೇಕಾಗಿದೆ.