Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

---Advertisement---

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ ಮೂಲಕ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರಿಗೆ ಕಾನೂನು ಹೋರಾಟದಲ್ಲಿ ಹಿನ್ನಡೆಯಾಗಿದೆ. ಮೂಡಾ ಕೇಸನ್ನು ಸಿಬಿಐಗೆ ವಹಿಸುವಂತೆ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.

ಈ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸಿದ್ದು, ಸಿಎಂ ವಿರುದ್ಧ ಮೂಡಾ ಪ್ರಕರಣವನ್ನು ಹೈಕೋರ್ಟ್ ಗೆ ವಜಿಸುವುದನ್ನು ನಿರಾಕರಿಸಿದೆ. ಮೂಡಾ ನಿವೇಶನ ಹಂಚಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಸ ಮೇಲೆ ಸಾಕಷ್ಟು ಆರೋಪಗಳು ಕೇಳಿ ಬಂದಿತ್ತು. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಿಎಂ ವಿರುದ್ಧ ಹಾಗೂ ಅವರ ಪತ್ನಿ ಪಾರ್ವತಿ ಅವರ ವಿರುದ್ಧವೂ ದೂರು ನೀಡಿದ್ದರು. ಈ ಪ್ರಕರಣವನ್ನು ಲೋಕಾಯುಕ್ತಕ್ಕೆ ವಹಿಸಲಾಗಿತ್ತು. ಆದರೆ ಈ ಕೇಸನ್ನು ಲೋಕಾಯುಕ್ತಕ್ಕೆ ಬೇಡ, ಸಿಬಿಐಗೆ ವಹಿಸಿ ಎಂದು ಸ್ನೇಹಮಯಿ ಕೃಷ್ಣ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.

ರಾಜ್ಯ ರಾಜಕಾರಣದಲ್ಲೂ ಮೂಡಾ ಪ್ರಕರಣ ತಲ್ಲಣ ಸೃಷ್ಟಿಸಿತ್ತು. ಈಗಾಗಲೇ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಡಿ ಕೂಡ ತನಿಖೆ ನಡೆಸುತ್ತಿದೆ. ಇದರ ನಡುವೆ ಸಿಬಿಐಗೆ ವಹಿಸಬೇಕೆಂಬ ಸ್ನೇಹಮಯಿ ಕೃಷ್ಣ ಅವರ ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ. ಇದು ತಾತ್ಕಾಲಿಕ ಹಿನ್ನಡೆಯಾಗಿದೆ. ಮೂಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಕ್ತಮ ನಡೆದಿದೆ ಎಂಬುದು ಸತ್ಯ. ನಾನು ಇದರ ವಿರುದ್ಧ ಕಾನೂನು ಹೋರಾಟವನ್ನು ಮುಂದುವರೆಸುತ್ತೇನೆ. ಮೇಲ್ಮನವಿ ಸಲ್ಲಿಸುತ್ತೇನೆ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment