ಬೆಂಗಳೂರು: ಬೆಳಗಾವಿ ರಾಜಕಾರಣದಲ್ಲಿ ಸತೀಶ್ ಜಾರಕಿಹೊಳಿ ಸ್ಟ್ರಾಂಗ್ ಆಗಿಯೇ ಗುರುತಿಸಿಕೊಂಡಿದ್ದಾರೆ. ಹೈಕಮಾಂಡ್ ನಾಯಕರ ಜೊತೆಗೂ ಒಳ್ಳೆಯ ಒಡನಾಟ ಹೊಂದಿದ್ದಾರೆ. ಹೀಗಾಗಿಯೇ ಕಳೆದ ಲೋಕಸಭಾ ಚುನಾವಣೆಯಲ್ಲಿ ಕೈ ನಾಯಕರ ವಿರೋಧದ ನಡುವೆಯೂ ಮಗಳು ಪ್ರಿಯಾಂಕ ನಿಲ್ಲಿಸಿ ಗೆಲುವು ತಮ್ಮದಾಗಿಸಿಕೊಂಡಿದ್ದರು. ಈಗ ಪ್ರಿಯಾಂಕ ಜಾರಕಿಹೊಳಿ ಸಂಸದೆಯಾಗಿ ರಾಷ್ಟ್ರ ರಾಜಕಾರಣದಲ್ಲಿ ಬ್ಯುಸಿಯಾಗಿದ್ದಾರೆ. ಈಗ ಮಗನನ್ನು ರಾಜ್ಯ ರಾಜಕಾರಣಕ್ಕೆ ತಂದಿದ್ದಾರೆ. ಸದ್ಯ ರಾಹುಲ್ ಜಾರಕಿಹೊಳಿ ದೊಡ್ಡ ಜವಾಬ್ದಾರಿಯನ್ನೇ ಹೊತ್ತಿದ್ದಾರೆ.
![](https://suddione.com/content/uploads/2024/10/gifmaker_me-5-1.gif)
ರಾಜ್ಯ ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ರಾಹುಲ್ ಜಾರಕಿಹೊಳಿ ರಾಜಕೀಯಕ್ಕೆ ಎಂಟ್ರಿಯಾಗಿದ್ದಾರೆ. ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ರಾಹುಲ್ ಜಾರಕಿಹೊಳಿ ಹಂಚಿಕೊ.ಮಡಿದ್ದು, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನನ್ನನ್ನು ಪ್ತಚಂಡ ಮತಗಳಿಂದ ಆಯ್ಕೆ ಮಾಡಿದ ಎಲ್ಲಾ ಮತದಾರರಿಗೂ ಹಾಗೂ ಪರೋಕ್ಷವಾಗಿ ನನ್ನ ಗೆಲುವಿಗೆ ಸಹಕರಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ಕಾಂಗ್ರೆಸ್ ನ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವಲ್ಲಿ ಜೊತೆಯಾಗಿ ಕೆಲಸ ಮಾಡೋಣಾ. ನಿಮ್ಮ ಬೆಂಬಲ ನನ್ನ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ. ನಾವೂ ಒಟ್ಟಿಗೆ ಹೊಸ ಜಾಗೃತಿಯೊಂದಿಗೆ ಕಾರ್ಯ ನಿರ್ವಹಿಸೋಣಾ ಎಂದು ಹೇಳಿದ್ದಾರೆ.
ರಾಹುಲ್, 1.80 ಲಕ್ಷ ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಯುವ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಗೆದ್ದು ಬೀಗಿದ್ದಾರೆ. ಆಗಸ್ಟ್ 20ರಿಂದ ಸೆಪ್ಟೆಂಬರ್ 22ರವರೆಗೆ ಯೂಥ್ ಕಾಂಗ್ರೆಸ್ ಚುನಾವಣೆ ರಾಜ್ಯಾದ್ಯಂತ ನಡೆದಿತ್ತು. ಅದರ ಫಲಿತಾಂಶ ಪ್ರಕಟವಾಗಿದ್ದು, ಉತ್ತಮ ಫಲಿತಾಂಶದೊಂದಿಗೆ ರಾಹುಲ್ ಜಾರಕಿಹೊಳಿ ಹುದ್ದೆ ಅಲಂಕರಿಸಿದ್ದಾರೆ. ಇನ್ನು ಈ ಸಂಭ್ರಮವನ್ನು ಸತೀಶ್ ಜಾರಕಿಹೊಳಿ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ತಿನ್ನಿಸಿ ಆಚರಿಸಿದ್ದಾರೆ.
![](https://suddione.com/content/uploads/2025/02/site.webp)