Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಸಚಿವ ಎನ್.ಚಲುವರಾಯಸ್ವಾಮಿ ಮತ್ತು ಎನ್.ಎಸ್.ಭೋಸರಾಜು ಜಿಲ್ಲೆಗೆ ಆಗಮನ

---Advertisement---

ಚಿತ್ರದುರ್ಗ. ಫೆ.10: ರಾಜ್ಯ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಇದೇ ಫೆ.11ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.

ಸಚಿವರು ಅಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 1.30ಕ್ಕೆ ಚಳ್ಳಕೆರೆಗೆ ಆಗಮಿಸುವರು. ಮಧ್ಯಾಹ್ನ 2.30ಕ್ಕೆ ಚಳ್ಳಕೆರೆ ತಾಲ್ಲೂಕಿನ ರೇಣುಕಾಪುರ ಗ್ರಾಮಕ್ಕೆ ಭೇಟಿ ನೀಡಿ, ಜಲಾನಯನ ಅಭಿವೃದ್ಧಿ ಇಲಾಖೆಯ   RAD-RAFTAR  ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸುವರು. ಸಂಜೆ 4ಕ್ಕೆ ರೇಣುಕಾಪುರದಿಂದ ಹೊರಟು ಸಂಜೆ 5ಕ್ಕೆ ಚಿತ್ರದುರ್ಗಕ್ಕೆ ಆಗಮಿಸುವರು. ಸಂಜೆ 5.30ಕ್ಕೆ ಚಿತ್ರದುರ್ಗದಿಂದ ಹೊರಟು ಸಂಜೆ 6ಕ್ಕೆ ಭರಮಸಾಗರಕ್ಕೆ ಆಗಮಿಸಿ, ಸಂಜೆ 6.30ಕ್ಕೆ ತರಳಬಾಳು ಹುಣ್ಣಿಮೆ ಮಹೋತ್ಸವ-2025 ಅಂಗವಾಗಿ ಏರ್ಪಡಿಸಲಾಗಿರುವ “ಕೃಷಿ ಮತ್ತು ಜಲಸಂರಕ್ಷಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 7.30ಕ್ಕೆ ಭರಮಸಾಗರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಹೆಚ್.ಜಿ.ಪ್ರಭಾಕರ್ ತಿಳಿಸಿದ್ದಾರೆ.

ಸಣ್ಣ ನೀರಾವರಿ ಸಚಿವರ ಜಿಲ್ಲಾ ಪ್ರವಾಸ

ಚಿತ್ರದುರ್ಗ. ಫೆ.10: ರಾಜ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಅವರು ಇದೇ ಫೆ.11ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 6ಕ್ಕೆ ರಾಯಚೂರಿನಿಂದ ಹೊರಟು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸುವರು. ಬೆಳಿಗ್ಗೆ 11ಕ್ಕೆ ಚಿತ್ರದುರ್ಗದಿಂದ ಹೊರಟು ಮಧ್ಯಾಹ್ನ 12ಕ್ಕೆ ಹೊಸದುರ್ಗ ತಾಲ್ಲೂಕಿನ ಬ್ರಹ್ಮವಿದ್ಯಾನಗರ ಸುಕ್ಷೇತ್ರ ಶ್ರೀ ಭಗೀರಥ ಪೀಠ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡುವರು. ಮಧ್ಯಾಹ್ನ 12.30ಕ್ಕೆ ಬ್ರಹ್ಮವಿದ್ಯಾನಗರ ಸುಕ್ಷೇತ್ರದಿಂದ ಹೊರಟು ಮಧ್ಯಾಹ್ನ 1ಕ್ಕೆ ಹೊಸದುರ್ಗಕ್ಕೆ ಆಗಮಿಸಿ, ಸಣ್ಣ ನೀರಾವರಿ ಇಲಾಖೆಯ ವಿವಿಧ ಕಾಮಗಾರಿಗಳ ಪರಿವೀಕ್ಷಣೆ ಮಾಡುವರು. ಮಧ್ಯಾಹ್ನ 3ಕ್ಕೆ ಹೊಸದುರ್ಗದಿಂದ ಹೊರಟು ಮಧ್ಯಾಹ್ನ 3.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ಸಣ್ಣ ನೀರಾವರಿ ಇಲಾಖೆಯ ಚಿತ್ರದುರ್ಗ ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಸಂಜೆ 4.50ಕ್ಕೆ ಪಕ್ಷದ ಕಚೇರಿಗೆ ಭೇಟಿ ನೀಡುವರು. ಸಂಜೆ 5ಕ್ಕೆ ಚಿತ್ರದುರ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ನೀರಾವರಿ ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment