ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 10 : ನ್ಯಾಯವಾದಿ ಸಿ.ವಿ.ಅಹೋಬಲನಾಯಕ(76) ಭಾನುವಾರ ಸಂಜೆ ಕೆ.ಎಸ್.ಆರ್.ಟಿ.ಸಿ. ಡಿಪೋ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.
![](https://suddione.com/content/uploads/2024/10/gifmaker_me-5-1.gif)
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೊನೆಯುಸಿರೆಳೆದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಹಿರಿಯ ನ್ಯಾಯವಾದಿ ಎಚ್.ಎಂ.ಎಸ್.ನಾಯಕ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಪಾಪಯ್ಯ ಸೇರಿದಂತೆ ಅಪಾರ ಅಭಿಮಾನಿಗಳು ಹಾಗೂ ವಕೀಲರುಗಳು ಮೃತರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದರು.
ಚಳ್ಳಕೆರೆ ತಾಲ್ಲೂಕು ಪರಶುರಾಂಪುರ ಸಮೀಪವಿರುವ ಚೌಳೂರಿನ ಜಮೀನಿನಲ್ಲಿ ಮೃತರ ಅಂತ್ಯಕ್ರಿಯೆ ಸೋಮವಾರ ನಡೆಯಿತು.
![](https://suddione.com/content/uploads/2025/01/studio-11.webp)
![](https://suddione.com/content/uploads/2025/02/site.webp)