Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫೆ.13 ರಿಂದ 15 ರವರೆಗೆ ಸಂತ ಸೇವಾಲಾಲರ 286 ನೇ ಜಯಂತಿ : ಆಹ್ವಾನ ಪತ್ರಿಕೆ ಬಿಡುಗಡೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 11 : ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ಫೆ.13 ರಿಂದ 15 ರವರೆಗೆ ನಡೆಯುವ ಸಂತ ಸೇವಾಲಾಲರ 286 ನೇ ಜಾತ್ರಾ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ಪ್ರವಾಸಿ ಮಂದಿರದಲ್ಲಿ ಮಂಗಳವಾರ ಬಿಡುಗಡೆಗೊಳಿಸಲಾಯಿತು.

ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ರಾಘವೇಂದ್ರನಾಯ್ಕ ಹದಿನಾಲ್ಕರಂದು ಮಧ್ಯಾಹ್ನ 2-30 ಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತ ಸೇವಾಲಾಲರ 286 ನೇ ಜಯಂತಿಯನ್ನು ಉದ್ಗಾಟಿಸುವರು. ಬಂಜಾರ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಹನುಮಂತನಾಯ್ಕ, ಲಿಂಗಾನಾಯ್ಕ, ಅನಂತಮೂರ್ತಿನಾಯ್ಕ, ರಮೇಶ್‍ನಾಯ್ಕ, ಕುಮಾರ, ನರೇನಹಳ್ಳಿ ಅರುಣ್‍ಕುಮಾರ್, ತಿಪ್ಪೇಶಿ, ಹೆಚ್.ಲಕ್ಷ್ಮಣ್ ಇನ್ನು ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment