Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂಡಾ ಕೇಸ್ : ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತದಿಂದ ಕ್ಲೀನ್ ಚಿಟ್

---Advertisement---

 

ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಲೋಕಾಯುಕ್ತದಿಂದ ಫೈನಲ್ ರಿಪೋರ್ಟ್ ಸಲ್ಲಿಕೆಯಾಗಿದೆ. ಲೋಕಾಯುಕ್ತ ಎಸ್ಪಿ ಉದೇಶ್ ಅವರು, ಐಜಿಪಿ ಸುಬ್ರಮಣ್ಯೇಶ್ವರ್ ರಾವ್ ಗೆ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ. ಸುಮಾರು 2,500 ಪುಟಗಳಷ್ಟು ವರದಿ ಸಲ್ಲಿಕೆಯಾಗಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ವರಸಿಯಲ್ಲಿ ಏನಿದೆ ಎಂಬುದನ್ನು ನೋಡೋದಾದ್ರೆ.

* ಸಿಎಂ ಪತ್ನಿ ಹೆಸರಿಗೆ ಹೇಗೆ ಜಮೀನು ವರ್ಗಾವಣೆಯಾಗಿದೆ ಎಂಬುದರ ವಿಚಾರಕ್ಕೆ ಸಂಬಂಧಸಿದಂತೆ ಸುಮಾರು 25ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಿದ್ದು, ಆ ಹೇಳಿಕೆಯನ್ನು ವರದಿಯಲ್ಲಿ ಉಲ್ಲೇಖ ಮಾಡಿದ್ದಾರೆ.

* ದೂರುದಾರ ಸ್ನೇಹಮಯಿ ಕೃಷ್ಣ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ಮಾಡಿದ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ.

* ಜೊತೆಗೆ ಸ್ನೇಹಮಯಿ ಕೃಷ್ಣ ಅವರ ಹೇಳಿಕೆಗಳನ್ನು ನಮೂದು ಮಾಡಲಾಗಿದೆ. ಸ್ನೇಹಮಯಿ ಕೃಷ್ಣ ಅವರು ನೀಡಿದ ಹಲವು ದಾಖಲೆಗಳನ್ನು ಸಹ ಅಟ್ಯಾಚ್ ಮಾಡಲಾಗಿದೆ.

* ಕೆಸರೆ ಸರ್ವೆ ನಂಬರ್ 464ರ 3.16 ಎಕರೆ ಜಮೀನಿನ ದಾಖಲೆಗಳು

* ವಿಜಯನಗರದಲ್ಲಿ ಬದಲಿಯಾಗಿ ನೀಡಿದ್ದ 14 ಸೈಟ್ ಗಳ ದಾಖಲೆ

* ಮೂಡಾ ಪ್ರಕರಣದ ನಾಲ್ಕು ಆರೋಪಿಗಳ ಹೇಳಿಕೆ, ಮೂಡಾ ಹಾಲಿ ಅಧಿಕಾರಿಗಳ ಹೇಳಿಕೆಗಳು, ಮೂಡಾ ಮಾಜಿ ಅಧ್ಯಕ್ಷರು, ಕಾರ್ಯದರ್ಶಿಗಳ ಹೇಳಿಕೆಗಳನ್ನು ಇದರಲ್ಲಿ ದಾಖಲಿಸಲಾಗಿದೆ.

ಇನ್ನು ಈ ಕೇಸ್ ನಲ್ಲಿ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದ್ದಾರೆ. ಮೂಡಾ ಅಕ್ರಮದಲ್ಲಿ ಅಧಿಜಾರಿಗಳದ್ದೇ ದೊಡ್ಡ ಲೋಪವಾಗಿದೆ. ಸಿದ್ದರಾಮಯ್ಯ ಅವರದ್ದೂ ಏನೂ ಪಾತ್ರವಿಲ್ಲ. ರಾಜಕೀಯ ಒತ್ತಡಕ್ಕೆ ಮಣಿದು ಸಿಎಂ ಧರ್ಮಪತ್ನಿ ಪಾರ್ವತಿ ಅವರಿಗೆ ಸೈಟ್ ಗಳನ್ನ ನೀಡಿಲ್ಲ. ಅಧಿಕಾರಿಗಳೇ ಮಾಡಿದ ದೊಡ್ಡ ತಪ್ಪು ಇದಾಗಿದೆ ಎಂದು ಲೋಕಾಯುಕ್ತ ಪೊಲೀಸರು ನೀಡಿರುವ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment