ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರು ಅಂದಿನಿಂದಲೂ ರಸ್ತೆ, ರೈತರು, ನೀರಾವರಿಗಾಗಿ ಹೋರಾಟ ಮಾಡಿಕೊಂಡೆ ಬಂದಿದ್ದಾರೆ. ಇದೀಗ ಇಂದು ಮಹಾದಾಯಿ ಹೋರಾಟ ಬಗ್ಗೆ ಮಾತನಾಡಿದ್ದು, ನಾನಿನ್ನು 4-5 ವರ್ಷ ಬದುಕಿರುತ್ತೇನೆ. ಆದರೆ ಮಹಾದಾಯಿ ನದಿ ನೀರಿಗಾಗಿ ನಾವೆಲ್ಲಾ ಪಕ್ಷ ಭೇದ ಮರೆತು ಹೋರಾಟ ಮಾಡಬೇಕಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಲ್ಲರೂ ಸೇರಿ ಹೋರಾಟ ಮಾಡಬೇಕಿದೆ. ರಾಜ್ಯಕ್ಕೆ ಆದ ಅನ್ಯಾಯ ಸರಿ ಮಾಡಲು ಶಕ್ತಿ ಮೀರಿ ಹೋರಾಟ ಮಾಡೋಣಾ ಎಂದಿದ್ದಾರೆ.
ಮಹಾದಾಯಿ ಯೋಜನೆ ವಿವಾದ ನ್ಯಾಯಾಲಯದಲ್ಲಿದೆ. ಕಳಸಾ ಬಂಡೂರಿಯಿಂದ 3.5 ಟಿಎಂಸಿ ನೀರು ಬಿಡಲು ಗೋವಾ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಅದಕ್ಕೆ ನಮ್ಮ ಸರ್ಕಾರ ಪ್ರತಿಭಟನೆ ಮಾಡಿ ಅರ್ಜಿ ಹಾಕಿದೆ. ವಿವಾದ ಕೋರ್ಟ್ ನಲ್ಲಿರುವಾಗ ಪ್ರಧಾನಿ ಏನು ಮಾಡುತ್ತಾರೆ. ಹಾಗಾಗಿ ನಮ್ಮವರು ಸ್ಟ್ರಾಂಗ್ ಆಗಿ ವಾದ ಮಾಡಬೇಕು. 25 ಟಿಎಂಸಿ ನೀರನ್ನು ಕರ್ನಾಟಕಕ್ಕೆ ಕೊಡಬೇಕು. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದೇನೆ.
ಮಹಾದಾಯಿ ಯೋಜನೆಗೆ ಗೋವಾ ಮತ್ತು ಪರಿಸರದ ಸಮಸ್ಯೆ ಇದೆ. ಅದಕ್ಕೆ ಕೊಡಲು ಆಗಲ್ಲ ಅಂತ ಹೇಳಿದ್ದಾರೆ. ಕುಡಿಯುವ ನೀರಿಗಾಗಿ ನಮ್ಮ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಾಡುತ್ತಿದೆ. ಎತ್ತಿನ ಹೊಳೆ ಯೋಜನೆಗೆ 8 ಸಾವಿರ ಕೋಟಿ ಮಂಜೂರು ಮಾಡಿದರು ಈಗ 25ಬಸಾವಿರ ಕೋಟಿ ನೀಡಿದ್ದಾರೆ. ಅದು ಎಲ್ಲಿಯವರೆಗೆ ಬಂದಿದೆ ಅನ್ನೋದು ಗೊತ್ತಿಲ್ಲ. ಗೋದಾವರಿ, ಕೃಷ್ಣ, ಕಾವೇರಿ ನದಿಗಳ ಜೋಡಣೆಗೆ ಮನವಿ ಮಾಡುತ್ತೇನೆ. ನಮ್ಮ ಪಾಲಿನ ನೀರನ್ನು ಕೊಡಬೇಕೆಂದು ಮನವಿ ಮಾಡುತ್ತೇನೆ. ಸಿದ್ದರಾಮಯ್ಯ ಅವರ ಜೊತೆಗೆ ಮಾತನಾಡುವುದಕ್ಕೆ ನನಗೆ ಯಾವುದೇ ಆತಂಕವಿಲ್ಲ ಎಂದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











