ಬೆಂಗಳೂರು: ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜಯಲಲಿತಾಗೆ ಸೇರಿದ್ದ ದುಬಾರಿ ಬೆಲೆ ಬಾಳುವ ಚಿನ್ನಾಭರಣವನ್ನು ಇಂದು ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲಾಗಿದೆ. ಬೆಂಗಳೂರಿನ ವಿಶೇಷ ಕೋರ್ಟ್ ವಶದಲ್ಲಿ ಜಯಲಲಿತಾಗೆ ಸಂಬಂಧಿಸಿದ ಚಿನ್ನಾಭರಣಗಳು ಇದ್ದವು. ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಯಲಲಿತಾ ವಿರುದ್ಧ ಕೇಸ್ ಬೆಂಗಳೂರಿನ ವಿಶೆಷ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ಇಂದು ಜಯಲಲಿತಾ ಅಪರಾಧಿ ಎಂದು ತೀರ್ಪು ನೀಡಿದ ಕೋರ್ಟ್, ಜಯಲಲಿತಾಗೆ ಸಂಬಂಧಿಸಿದ, ಒಡವೆ, ಆಸ್ತಿ ಪತ್ರಗಳನ್ನೆಲ್ಲ ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಿದೆ.

ಸುಪ್ರೀಂ ಕೋರ್ಟ್ ಕೂಡ ಈ ತೀರ್ಪನ್ನು ಎತ್ತಿ ಹಿಡಿದಿದೆ. ಹಿಮನತಿರುಗಿಸಿದ ಚಿನ್ನಾಭರಣದಲ್ಲಿ ಚಿನ್ನದ ಸೊಂಟದ ಡಾಬು, ಚಿನ್ನದ ಕಿರೀಟ, ವಾಚುಗಳು, ಚಿನ್ನದ ಕತ್ತಿ ಸೇರಿದಂತೆ ಹಲವು ದುಬಾರಿ ಬೆಲೆಯ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಿ ವಿಶೇಷ ಕೋರ್ಟ್ ನ್ಯಾಯಾಧೀಶ ಹೆಚ್.ಎ.ಮೋಹನ್ ಆದೇಶ ಹೊರಡಿಸಿದ್ದಾರೆ.
ಇದರ ಜೊತೆಗೆ ಸಾವಿರಾರು ಕೋಟಿ ಆಸ್ತಿ ಪತ್ರಗಳನ್ನು ಹಿಂತಿರುಗಿಸಿ ಈ ಆಸ್ತಿಯನ್ನೆಲ್ಲಾ ಹರಾಜು ಹಾಕಬೇಕು ಅಥವಾ ಸಾರ್ವಜನಿಕವಾಗಿ ಬಳಸಬೇಕು ಎಂದು ಆದೇಶದಲ್ಲಿ ತಿಳಿಸಿದೆ. ಇನ್ನು ತಮಿಳುನಾಡಿನಿಂದ ಆಗಮಿಸಿದ್ದ ಗೃಹ ಮಂತ್ರಿಗಳು ಭಾರೀ ಭದ್ರತೆಯೊಂದಿಗೆ ಜಯಲಲಿತಾ ಅವರ ಒಡವೆಗಳನ್ನು ತಮಿಳುನಾಡಿಗೆ ಸಾಗಿಸಿದ್ದಾರೆ. 27 ಕೆಜಿ ತೂಕವುಳ್ಳ 1606 ಬಗೆಯ ಚಿನ್ನ, ವಜ್ರಾಭರಣಗಳು, 2,20,384 ರೂಪಾಯಿಯ ಹಳೆಯ ನೋಟುಗಳು, 10.18 ಕೋಟಿ ಮೊತ್ತದ ಬ್ಯಾಂಕ್ ನ ನಿಶ್ಚಿತ ಠೇವಣಿಗಳು, ತಮಿಳುನಾಡು ಪೊಲೀಸರ ವಶದಲ್ಲಿರುವ ಜಯಲಲಿತಾರು ಬಳಸುತ್ತಿದ್ದ ಐಷಾರಾಮಿ ಬಸ್ ಹರಾಜಿಗೆ ಸೂಚನೆ ನೀಡಲಾಗಿದೆ. ತಮಿಳುನಾಡಿನ ಚೆನ್ನೈ, ತಂಜಾವೂರು, ಚೆಂಗಲಪಟ್ಟು, ಕಾಂಚಿಪುರಂ, ತಿರುವಳ್ಳೂರ್, ತಿರುವರೂರ್, ತೂತುಕುಡಿಯಲ್ಲಿನ 1526 ಎಕರೆ ಜಮೀನು ಹರಾಜಿನ ಬದಲು ಸಾರ್ವಜನಿಕ ಬಳಕೆಗೆ ಮೀಸಲಿಡಲು ಕೋರ್ಟ್ ಸಲಹೆ ನೀಡಿದೆ.


















