ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಕೋಡಿಹಳ್ಳಿ ಟಿ.ಶಿವಮೂರ್ತಿ, ಚಳ್ಳಕೆರೆ
ಮೊ : 97427 56304
ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 17 : ತಾಲ್ಲೂಕಿನ ಚಿಕ್ಕಮ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ತಳಕು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಸಿಆರ್ಪಿ ಟಿ.ವಿ ತಿಪ್ಪೇಸ್ವಾಮಿರವರು ಪ್ರಾಸ್ಥಾವಿಕವಾಗಿ ಮಾತನಾಡಿ 7 ಕಾರ್ನರ್ ಗಳ ಬಗ್ಗೆ ಅತ್ಯಂತ ವಿಸ್ತಾರವಾಗಿ ತಿಳಿಸಿದರು, ನಂತರ ಚಳ್ಳಕೆರೆ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್ ಕೆ.ಎಸ್ ರವರು ಕಲಿಕಾ ಹಬ್ಬ ಮಕ್ಕಳ ಕಲಿಕೆಗೆ ಪ್ರೇರಣೆಯಾಗಿದೆ ಇದು ಮಕ್ಕಳ ಸರ್ವೊತೊಮುಖ ಅಭಿವೃದ್ದಿಗೆ ಪೂರಕವಾಗಿದೆ ಎಂದು ಸಂತಸವನ್ನು ವ್ಯಕ್ತಪಡಿಸಿದರು.
ಮುಖ್ಯ ಶಿಕ್ಷಕರು ಆದ ಜಗನ್ನಾಥ.ಕೆ.ಏಚ್ ರವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ಸಹ ಪಠ್ಯ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಉತ್ತಮ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ತುಂಬಾ ಸಹಕಾರಿ ಎಂದು ಆಶಯ ವ್ಯಕ್ತಪಡಿಸಿದರು.
ನಂತರ ಎಲ್ಲಾ ತಳಕು ಕ್ಲಸ್ಟರ್ ಮುಖ್ಯ ಶಿಕ್ಷಕರು ಹಾಗೂ ಮಕ್ಕಳು ಆಗಮಿಸಿ ಕಾರ್ಯಕ್ರಮಕ್ಕೇ ಮೆರಗು ನೀಡಿದರು, ತೀರ್ಪುಗಾರರಾಗಿ ಮಲ್ಲಮ್ಮ, ತಿಪ್ಪಿರಮ್ಮ , ಮಮತಾ, ಲಕ್ಷ್ಮೀದೇವಿ, ತ್ರಿವೇಣಿ, ಶಶಿಕಲಾ , ನವೀನ್ ಕುಮಾರ್, ತಿಮ್ಮಣ್ಣ, ರಾಜು ಹಾಗೂ ತಾಲೂಕು ಕ್ಲಸ್ಟರ್ ನ ಪ್ರತಿ ಶಾಲೆಯಿಂದ ಒಬ್ಬ ಶಿಕ್ಷಕರು ಬಂಜಗೆರೆ ಕ್ಲಸ್ಟರ್ ನ ಶಿಕ್ಷಕರು ಹಾಜರಿದ್ದರು.
ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ತಿಪ್ಪೇಸ್ವಾಮಿ ಸದಸ್ಯರಾದ ಪಾಲಯ್ಯ ಸುಜಾತ ಕೀರ್ತನ ಶಿಲ್ಪಮ್ಮ ಸಿದ್ದಪ್ಪ ಲಕ್ಷ್ಮೀದೇವಿ ತಿಪ್ಪೇಸ್ವಾಮಿ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಭಾಗ್ಯಮ್ಮ, ಗೌರಮ್ಮ ಬೋರಣ್ಣ , ಹಾಗೂ ಸಮಸ್ತ ಗ್ರಾಮಸ್ಥರು ಹಾಗೂ ಪೋಷಕರು ಹಾಗೂ ಸಮಸ್ತ ನಾಗರಿಕ ಬಂಧುಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಎಲ್ಲರ ಸಹಕಾರದೊಂದಿಗೆ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್