Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ರಾಹಕರಿಗೆ ಬಿಗ್ ಶಾಕ್ : ನಂದಿನಿ ಹಾಲಿನಲ್ಲಿ ಮತ್ತೆ ಹೆಚ್ಚಳ ಸಾಧ್ಯತೆ..!

---Advertisement---

ಬೆಂಗಳೂರು: ಇತ್ತಿಚೆಗಷ್ಟೇ ನಂದಿನಿ ಹಾಲಿನ ದರ ಹೆಚ್ಚಳವಾಗಿದೆ. ಈಗ ಮತ್ತೆ ಹೆಚ್ಚಳವಾಗುವ ಸಾಧ್ಯತೆ ಇದೆ.ಹಾಲಿನ ದರ ಹೆಚ್ಚಳಕ್ಕೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಲಾಗಿದೆ. ಪ್ರತಿ ಲೀಟರ್ ಗೆ ಐದು ರೂಪಾಯಿ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ದರ ಹೆಚ್ಚಳದ ವಿಚಾರವನ್ನು ಇದೀಗ ಸಿಎಂ ಸಿದ್ದರಾಮಯ್ಯ ಅವರು ತೀರ್ಮಾನಿಸಬೇಕಿದೆ. ಯಾಕಂದ್ರೆ ದರ ಪ್ರಸ್ತಾವನೆಯನ್ನು ಕೆಎಂಎಫ್ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗಿದೆ.

ಹಾಲಿನ ದರ ಏರಿಕೆ ಮಾಡುವುದಕ್ಕೆ ಕೆಎಂಎಫ್ ಸಿದ್ದರಾಮಯ್ಯ ಅವರ ಅನುಮತಿಗಾಗಿ ಕಾಯುತ್ತಿದೆ. ಸಿಎಂ ಸಿದ್ದರಾಮಯ್ಯ ಅವೆಉ ಅನುಮತಿ ನೀಡಿದ ಬೆನ್ನಲ್ಲೇ ದರ ಏರಿಕೆ ಮಾಡಲಿದೆ‌ ಹಾಲಿನ ದರ ಏರಿಕೆ ಮಾಡಬೇಕು ಎಂದು ಕೆಎಂಫ್ ಮುಂದೆ ರೈತರು ಪ್ರತಿಭಟನೆ ಮಾಡಿದ್ದರು. ಹೀಗಾಗಿ ದರ ಏರಿಕೆಗೆ ಪ್ರಸ್ತಾವನೆಯನ್ನು ಸಿಎಂ ಮುಂದೆ ಇಡಲಾಗಿದೆ.

ಜಾನುವಾರುಗಳಿಗೆ ನೀಡುತ್ತಿರುವ ಪದಾರ್ಥಗಳ ಬೆಲೆ ಹೆಚ್ಚಳವಾಗಿದೆ. ಮೇವು, ಲೇಬರ್, ವಿದ್ಯುತ್ ಸೇರಿ ಇತರೆ ಎಲ್ಲಾ ಬೆಲೆಯೂ ಹೆಚ್ಚಾಗಿದೆ. ದಿ‌ನೇ ದಿನೇ ಖರ್ಚುಗಳು ಕೂಡ ಹೆಚ್ಚಾಗುತ್ತಿದೆ. ಇದರಿಂದ ಹಾಲಿನ ದರ ಅನಿವಾರ್ಯವಾಗಿದೆ. ದರ ಏರಿಕೆ ಮಾಡದೆ ಹೋದಲ್ಲಿ ರೈತರಿಗೆ ಉತ್ಪಾದನೆಗೆ ತಕ್ಕಂತೆ ದರ ನೀಡಲು ಒಕ್ಕೂಟಗಳಿಗೆ ಸಾಧ್ಯವಿಲ್ಲ ಎಂಬುದು ಒಕ್ಕೂಟಗಳ ಅಭಿಪ್ರಾಯ. ಹಾಗೇ ಕೆಲವು ದಿನಗಳ ಹಿಂದೆ ಕೆಎಂಎಫ್ ಮುಂದೆ ಪ್ರತಿಭಟನೆಯನ್ನು ಮಾಡಿತ್ತು. ರೈತರ ಪ್ರತಿಭಟನೆಗೆ ಮಣಿದಿರುವ ಕೆಎಂಎಫ್ ದರ ಏರಿಕೆಯ ಪ್ರಸ್ತಾಪವನ್ನು ಸರ್ಕಾರದ ಮುಂದೆ ಇಟ್ಟಿದೆ. ಅಲ್ಲಿಂದ ಅನುಮತಿ ಸಿಕ್ಕ ಬಳಿಕ ದರ ಏರಿಕೆ ಮಾಡಲಿದೆ. 5 ರೂಪಾಯಿ ಏರಿಸಲು ಪ್ಲ್ಯಾನ್ ನಡೆದಿದ್ದು ಸಿಎಂ ಸಿದ್ದರಾಮಯ್ಯ ಅವರು ಎಷ್ಟು ದರ ಏರಿಸಲು ಅನುಮತಿ ಕೊಡ್ತಾರೆ ನೋಡಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment