Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿಯ ಶಿಸ್ತು ಸಮಿತಿ ನೋಟೀಸ್ ಗೆ ಯತ್ನಾಳ್ ಉತ್ತರ : ಏನಂದ್ರು ಫೈಯರ್ ಬ್ರಾಂಡ್..?

---Advertisement---

ದೆಹಲಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನೇರ ಟಾರ್ಗೆಟ್ ಬಿ.ಎಸ್.ಯಡಿಯೂರಪ್ಪ ಅಮನಡ್ ಸನ್ಸ್. ಅದರಲ್ಲೂ ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದಾಗಿಂದಲೂ ಓಪನ್ ಆಗಿಯೇ ವಾಗ್ದಾಳಿ ನಡೆಸುತ್ತಿದ್ದರು. ಇದು ಬಿಜೆಪಿ ಪಕ್ಷಕ್ಕೂ ಮುಜುಗರವನ್ನುಂಟು ಮಾಡಿತ್ತು. ಹೀಗಾಗಿ ಬಿನೆಪಿಯ ಶಿಸ್ತು ಸಮಿತಿ ಯತ್ನಾಳ್ ಅವರಿಗೆ ನೋಟೀಸ್ ಜಾರಿ ಮಾಡಿತ್ತು. ಅದಕ್ಕೆ ಯತ್ನಾಳ್ ಅವರು ಉತ್ತರ ನೀಡಿದ್ದಾರೆ ಎಂಬುದು ತಿಳಿದು ಬಂದಿದೆ.

ಕೇಂದ್ರ ಶಿಸ್ತು ಸಮಿತಿಯ ನೋಟೀಸ್ ಗೆ ಯತ್ಬಾಳ್ ಅವರು 9 ಪುಟಗಳ ಉತ್ತರವನ್ನು ನೀಡಿದ್ದಾರೆ. ಇ-ಮೇಲ್ ಮೂಲಕ ಉತ್ತರ ನೀಡಿದ್ದು, ನೋಟೀಸ್ ನೀಡಿದ 72 ಗಂಟೆಯ ಒಳಗೆ ಉತ್ತರ ನೀಡಿ ನಿಯಮವನ್ನು ಪಾಲನೇ ಮಾಡಿದ್ದಾರೆ ಎನ್ನಲಾಗುತ್ತಿದೆ. ಅಷ್ಟಕ್ಕೂ ನೋಟೀಸ್ ಗೆ ಯತ್ನಾಳ್ ಕೊಟ್ಟ ಉತ್ತರವೇನು ಎಂಬುದು ಬಹಿರಂಗವಾಗಿಲ್ಲ. ಆದರೆ ಕೆಲವು ದಿನಗಳ ಹಿಂದಷ್ಟೇ ಯತ್ನಾಳ್ ಅವರುಶಿಸ್ತು ಸಮಿತಿಯ ನೋಟೀಸ್ ಗೆ ಉತ್ತರ ಕೊಡುವುದಕ್ಕೆ ಏನು ಇಲ್ಲ ಎಂದೇ ಹೇಳಿದ್ದರು. ಈಗ ಪುಟಗಟ್ಟಲೇ ಉತ್ತರ ನೀಡಿದ್ದಾರೆಂದು ತಿಳಿದು ಬಂದಿದೆ.

ಇನ್ನು ಈ ಉತ್ತರದಲ್ಲಿ ವಿಜಯೇಂದ್ರ ವಿರುದ್ಧ ಸರಣಿ ದೂರುಗಳನ್ನು ನೀಡಿದ್ದು, ಪಕ್ಷದ ಚೌಕಟ್ಟಿನಲ್ಲಿ ವಕ್ಫ್ ವಿರುದ್ಧ ಹೋರಾಟ ಮಾಡಿರುವುದು, ಆ ಹೋರಾಟದಲ್ಲಿ ಸಕ್ಸಸ್ ಆಗಿದ್ದನ್ನು ಬರೆದಿದ್ದಾರೆ ಎನ್ನಲಾಗಿದೆ. ಇನ್ನೂ ಯತ್ನಾಳ್ ಅವರಿಗೆ ಶಿಸ್ತು ಸಮಿತಿ ನೀಡಿದ ನೋಟೀಸ್ ಇದೇ ಮೊದಲೇನು ಅಲ್ಲ. ಈ ಹಿಂದೆ ಕೂಡ ನೋಟೀಸ್ ನೀಡಿತ್ತು. ಆದರೂ ಯತ್ನಾಳ್ ಅವರು ಯಡಿಯೂರಪ್ಪ ಅವರ ಫ್ಯಾಮಿಲಿ ಮೇಲೆ ವಾಗ್ದಾಳಿ ನಡೆಸೋದು ಮಾತ್ರ ನಿಂತಿರಲಿಲ್ಲ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment