ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 18 : ರಾಜ್ಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳಿಂದ ವಸೂಲು ಮಾಡುತ್ತಿರುವ ಟೋಲ್ ಶುಲ್ಕವನ್ನು ಸಂಪೂರ್ಣವಾಗಿ ರದ್ದುಪಡಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎದುರು ಕರುನಾಡ ವಿಜಯಸೇನೆಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ಯೋಜನಾ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ವಾಹನಗಳನ್ನು ಖರೀಧಿಸುವವರು ಸರ್ಕಾರಕ್ಕೆ ರೋಡ್ ಟ್ಯಾಕ್ಸ್ ಕಟ್ಟಿರುತ್ತಾರೆಂದ ಮೇಲೆ ಟೋಲ್ ಶುಲ್ಕ ಏಕೆ ವಸೂಲಿ ಮಾಡಬೇಕೆಂದು ಪ್ರತಿಭಟನಾಕಾರರು ಪ್ರಶ್ನಿಸಿದರು.
ರಾಷ್ಟ್ರೀಯ ಹೆದ್ದಾರಿ ಟೋಲ್‍ಗಳಲ್ಲಿ ಶುಲ್ಕ ರದ್ದುಪಡಿಸಬೇಕು. ಇಲ್ಲವಾದಲ್ಲಿ ಶೇ. ಎಪ್ಪತ್ತರಷ್ಟು ಶುಲ್ಕ ಕಡಿತಗೊಳಿಸಬೇಕು.
ಕಳೆದ ಹದಿನೈದು ಇಪ್ಪತ್ತು ವರ್ಷಗಳಿಂದ ಟೋಲ್‍ನಲ್ಲಿ ವಾಹನಗಳಿಂದ ಶುಲ್ಕ ವಸೂಲಿ ಮಾಡುತ್ತಿರುವುದರಿಂದ ಚತುಷ್ಪ ರಸ್ತೆಗಳನ್ನು ನಿರ್ಮಿಸಿರುವ ಟೆಂಡರ್‍ದಾರರು
ನಿರ್ವರ್ಹಣೆಗಾರರು ಈಗಾಗಲೆ ಕೋಟಿ ಕೋಟಿ ರೂ.ಗಳನ್ನು ಸಂಗ್ರಹಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಟೋಲ್‍ಗಳಲ್ಲಿ ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯವಿರಬೇಕು. ಹೆದ್ದಾರಿಯ ಎರಡು ಬದಿಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸಿ ದೊಡ್ಡ ಮರವನ್ನಾಗಿ ಬೆಳೆಸಬೇಕು. ಅಪಘಾತವಾದ ಕೂಡಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಗಳಲ್ಲಿ ಅಲ್ಲಲ್ಲಿ ಪ್ರಥಮ ಚಿಕಿತ್ಸೆ ವ್ಯವಸ್ಥೆ ಕಲ್ಪಿಸಬೇಕೆಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.
ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಜಗದೀಶ್, ಉಪಾಧ್ಯಕ್ಷೆ ರತ್ನಮ್ಮ, ಮುಜಾಹಿದ್, ಮಧು, ಅಖಿಲೇಶ್, ಸುರೇಶ್, ಅವಿನಾಶ್, ತಿಪ್ಪೇಸ್ವಾಮಿ, ಕಮಲ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
















