Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

3000 ಹೊಸ ಲೈನ್‍ಮೆನ್‍ಗಳ ನೇಮಕ : ಸಚಿವ ಕೆ.ಜೆ.ಜಾರ್ಜ್

---Advertisement---

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 18 : ಶೀಘ್ರದಲ್ಲಿಯೇ 3000 ಲೈನ್‍ಮೆನ್‍ಗಳನ್ನು ಹೊಸದಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಇಂಧನ ಇಲಾಖೆ ವಿಷಯಗಳ ಕುರಿತು ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್ ಅವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.

ಈ ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್ ಅವರು ಮಾತನಾಡಿ, ಇಂಧನ ಇಲಾಖೆಯಲ್ಲಿ ಲೈನ್‍ಮೆನ್‍ಗಳು ಸೇರಿದಂತೆ ಕೆಳಹಂತದ ಅಧಿಕಾರಿ, ಸಿಬ್ಬಂದಿಗಳು ಬಹಳ ವರ್ಷಗಳಿಂದಲೂ ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದು, ಇದರಿಂದಾಗಿ ಹಿರಿಯ ಅಧಿಕಾರಿಗಳ ಮಾತಾಗಲಿ ಅಥವಾ ಜನಪ್ರತಿನಿಧಿಗಳ ಮಾತಿಗೆ ಬೆಲೆ ಕೊಡುತ್ತಿಲ್ಲ.  ಹೀಗಾಗಿ ಅಂತಹ ಲೈನ್‍ಮೆನ್ ಹಾಗೂ ಸಿಬ್ಬಂದಿಯನ್ನು ಬೇರೆ ಸ್ಥಳಕ್ಕೆ ವರ್ಗಾವಣೆ ಮಾಡುವುದು ಸೂಕ್ತ.  ವಿದ್ಯುತ್ ಪರಿವರ್ತಕಗಳು ಸುಟ್ಟುಹೋದ ಸಂದರ್ಭದಲ್ಲಿ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸುತ್ತಿಲ್ಲ, ವಿನಾಕಾರಣ ವಿಳಂಬ ಮಾಡುತ್ತಾರೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು, ಈ ನೇಮಕ ಪ್ರಕ್ರಿಯೆ ಸಂದರ್ಭದಲ್ಲಿ, ಹಲವು ವರ್ಷಗಳಿಂದ ಒಂದೇ ಕಡೆ ಕೆಲಸ ಮಾಡುತ್ತಿರುವ ಲೈನ್‍ಮೆನ್‍ಗಳನ್ನು ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇನ್ನು ವಿದ್ಯುತ್ ಪರಿವರ್ತಕಗಳ ಬದಲಾವಣೆ ಸಂಬಂಧಿಸಿದಂತೆ ಈಗಾಗಲೆ ಕೃಷಿ ಪಂಪ್‍ಸೆಟ್‍ಗಳ ಅಕ್ರಮ ಸಕ್ರಮ ಕಾರ್ಯ ಪ್ರಗತಿಯಲ್ಲಿದ್ದು, ಈ ಕಾರ್ಯ ಪೂರ್ಣಗೊಂಡ ಬಳಿಕ, ವಿದ್ಯುತ್ ಪೂರೈಕೆ ಸಾಮಥ್ರ್ಯ ಸಮರ್ಪಕಗೊಂಡು, ವಿದ್ಯುತ್ ಟ್ರಾನ್ಸ್‍ಫಾರ್ಮರ್‍ಗಳು ಸುಟ್ಟುಹೋಗುವುದು ನಿಯಂತ್ರಣಕ್ಕೆ ಬರಲಿದೆ ಎಂದರು.

ವರ್ಗಾವಣೆಯ ಎಚ್ಚರಿಕೆ :
ಚಿತ್ರಹಳ್ಳಿ, ಚಿಕ್ಕಜಾಜೂರು, ಸಾಸಲು ಗ್ರಾಮದಲ್ಲಿ ಕೆಪಿಟಿಸಿಎಲ್ ವತಿಯಿಂದ ಸಬ್‍ಸ್ಟೇಷನ್‍ಗಳ ಕಾಮಗಾರಿ ಪೂರ್ಣಗೊಂಡಿದೆ.  ಆದರೆ ಅಧಿಕಾರಿಗಳಿಂದ ತಪಾಸಣಾ ವರದಿ ನೀಡುವುದು ಬಾಕಿ ಇದೆ.  ಕಾಮಗಾರಿ ಪೂರ್ಣಗೊಂಡಿದ್ದರೂ, ಚಿತ್ರದುರ್ಗ ವಿಭಾಗ ಬೆಸ್ಕಾಂ ಕಾರ್ಯಪಾಲಕ ಅಭಿಯಂತರರು ಕೆಪಿಟಿಸಿಎಲ್ ಅಧಿಕಾರಿಗಳೊಂದಿಗೆ ಸಮನ್ವಯ ಮಾಡದೆ, ನಿರ್ಲಕ್ಷ್ಯ ತೋರಿದ್ದಾರೆ.  07 ತಾಸು ವಿದ್ಯುತ್ ಪೂರೈಕೆಗೆ ವ್ಯವಸ್ಥ ಮಾಡಿಕೊಡಲು ಅವಕಾಶವಿದ್ದರೂ ಕ್ರಮಕ್ಕೆ ಮುಂದಾಗಿಲ್ಲ ಎಂದು ಸಚಿವರು ಈ ಸಂದರ್ಭದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.  ಚಿತ್ರದುರ್ಗ ವಿಭಾಗದಲ್ಲಿ ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ಗೆ ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳ ಮತ್ತು ಸಾರ್ವಜನಿಕರ ದೂರುಗಳಿಗೆ ಸ್ಪಂದಿಸುತ್ತಿಲ್ಲ, ದೂರವಾಣಿ ಕರೆಯನ್ನು ಕೂಡ ಸ್ವೀಕರಿಸುವುದಿಲ್ಲ, ಅಥವಾ ಮೊಬೈಲ್ ಸ್ವಿಚ್ ಆಫ್ ಮಾಡಿಬಿಡುತ್ತಾರೆ.  ಇದರಿಂದ ಸಮಸ್ಯೆಗಳ ಪರಿಹಾರವಾಗದೆ ಸಾರ್ವಜನಿಕರು, ರೈತರು, ಜನಪ್ರತಿನಿಧಿಗಳು ಜಿಲ್ಲಾಧಿಕಾರಿಗಳಿಗೆ ದೂರು ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಇಂಧನ ಸಚಿವರ ಗಮನಕ್ಕೆ ತಂದರು.  ಇದಕ್ಕೆ ದನಿಗೂಡಿಸಿದ ಸಚಿವರು, ನಮಗೂ ಈ ಬಗ್ಗೆ ದೂರುಗಳು ಕೇಳಿಬಂದಿವೆ. ಇಂತಹ ಅಧಿಕಾರಿಗಳ ಕಾರ್ಯ ವೈಖರಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ, ಕೂಡಲೆ ವರ್ಗಾವಣೆಗೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...