Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಫೆಬ್ರವರಿ 22 ಮತ್ತು 23 ರಂದು ಸರಿಗಮ ಸಂಗೀತ ನಾಟಕೋತ್ಸವ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 19 : ಸರಿಗಮ ಸಂಗೀತ ಪಾಠಶಾಲೆ ಚಿತ್ರದುರ್ಗ ವತಿಯಿಂದ ಪರಮರತ್ನ ಸಂಗೀತ ಸಂಸ್ಥೆ ಅರ್ಪಿಸುವ ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿಗಳವರ ಜಯಂತ್ಯೋತ್ಸವ ಅಂಗವಾಗಿ ನಗರದ ತರಾಸು ರಂಗಮಂದಿರದಲ್ಲಿ ಫೆ. 22 ಮತ್ತು 23 ರಂದು ಸಂಜೆ 4.30ಕ್ಕೆ ಸರಿಗಮ ಸಂಗೀತ ನಾಟಕೋತ್ಸವ ಆಯೋಜಿಸಲಾಗಿದೆ ಎಂದು ಸರಿಗಮ ಸಂಗೀತ ನಾಟಕೋತ್ಸವ ಸಮಿತಿ ಕಾರ್ಯದರ್ಶಿ ಸುಜೀತ ಕುಲಕರ್ಣಿ ತಿಳಿಸಿದರು.

ನಗರದ ಪತ್ರಿಕಾಭವನದಲ್ಲಿ ಬುಧವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಫೆಬ್ರವರಿ 22 ರಂದು ಉದ್ಘಾಟನಾ ಸಮಾರಂಭದಲ್ಲಿ ಮಾದರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು.

ಮುಖ್ಯ ಅತಿಥಿಗಳಾಗಿ ಶಾಸಕ ಕೆ. ಸಿ. ವೀರೇಂದ್ರ ಪಪ್ಪಿ, ರಾಜ್ಯ ಪ್ರಶಸ್ತಿ ಪುರಸ್ಕೃತ ರಂಗಕಾರ್ಮಿಗಳ ಚಳ್ಳಕೆರೆ ಕೆ.ಪಿ. ಭೂತಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಿ. ಎಂ. ಗುರುನಾಥ್, ರಿಯಲ್ ಎಸ್ಟೇಟ್ ಉದ್ಯಮಿ ಸೈಟ್ ಬಾಬಣ್ಣ ಭಾಗವಹಿಸುವರು.

ಸರಿಗಮ ಸಂಗೀತ ನಾಟಕೋತ್ಸವ ಅಧ್ಯಕ್ಷ ಸತ್ಯನಾರಾಯಣ ರೆಡ್ಡಿ ಅಧ್ಯಕ್ಷತೆ ವಹಿಸುವರು. ಫೆಬ್ರವರಿ 23 ರಂದು ಸಮಾರೋಪ ಸಮಾರಂಭದಲ್ಲಿ ಮುರುಘಾ ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸಕುಮಾರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು.

ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಶಸ್ತಿ ಪುರಸ್ಕೃತ ರಂಗಕಾರ್ಮಿಗಳ ಬಿ. ಕುಮಾರಸ್ವಾಮಿ, ನಗರಸಭೆ ಅಧ್ಯಕ್ಷೆ ಬಿ. ಎನ್. ಸುಮಿತ ರಾಘವೇಂದ್ರ, ಕೆಡಿಪಿ ಸದಸ್ಯ ಕೆ. ಸಿ.ನಾಗರಾಜ್, ಮೈಸೂರು ಮುಖ್ಯ ಅಗ್ನಿಶಾಮಕ ಅಧಿಕಾರಿ ಪ್ರೊ.ಟಿ. ಜಯರಾಮ್ ಭಾಗವಹಿಸುವರು.

ಹೂವಿನ ಹಡಗಲಿ ನಿವೃತ್ತ ಪೋ. ಟಿ. ಪರಮೇಶ್ವರಪ್ಪ ಅಧ್ಯಕ್ಷತೆ ವಹಿಸುವರು ಎಂದರು. ಪತ್ರಿಕಾಗೋಷ್ಠಿಯಲ್ಲಿ ಸರಿಗಮ ಸಂಗೀತ ನಾಟಕೋತ್ಸವ ಸಮಿತಿ ಅಧ್ಯಕ್ಷ ಸತ್ಯನಾರಾಯಣ ರೆಡ್ಡಿ, ಉಪಾಧ್ಯಕ್ಷರು ಡಾ.ಟಿ.ಭವ್ಯರಾಣಿ, ಸದಸ್ಯ ಸಿ. ಮಂಜುನಾಥ್ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...