ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಇದೀಗ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೇಂದ್ರ ಸಚಿವರಾದ ಮೇಲೆ ಓಡಾಟ ಹೆಚ್ಚು ಮಾಡಿದ್ದ ಕುಮಾರಸ್ವಾಮಿ ಅವರು, ಅನಾರೋಗ್ಯಕ್ಕೆ ಈಡಾಗಿದ್ದರು. ಹೀಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಟ್ರೀಟ್ಮೆಂಟ್ ಮುಗಿದ ಬಳಿಕ ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ.

ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದಾಗಿನಿಂದ ಬಿಡುವಿಲ್ಲದಂತೆ ಓಡಾಟ ನಡೆಸುತ್ತಿದ್ದಾರೆ. ವಿವಿಧ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ. ಜನರ ನಡುವೆ ಬೆರೆತು ಅವರ ಕಷ್ಟ ಸುಖಗಳನ್ನ ಕೇಳುತ್ತಿದ್ದಾರೆ. ಹೀಗಾಗಿ ಬಿಡುವಿಲ್ಲದ ಓಡಾಟದಿಂದ ದೇಹ ಸುಸ್ತಾಗಿದೆ. ಹೀಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ನಿಗಧಿ ಮಾಡಿದ್ದ ಕಾರ್ಯಕ್ರಮಗಳೆಲ್ಲ ರದ್ದಾಗಿವೆ.

ಇದರ ನಡುವೆ ರಾಮನಗರದ ಬಿಡದಿ ಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಸಂಸದ ಡಾ. ಸಿ.ಎನ್.ಮಂಜುನಾಥ್ ಹಾಗೂ ಅವರ ಸಂಬಂಧಿಕರು ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆಂದು ಆರೋಪ ಕೇಳಿ ಬಂದಿದೆ. ಈ ವಿಚಾರವಾಗಿ ಕಂದಾಯ ಇಲಾಖೆ ಹಾಗೂಮಾಪನ ಮತ್ತು ಭೂ ದಾಖಲೆಗಳ ಇಲಾಖೆ ಅಧಿಕಾರಿಗಳು ಕೂಡ ಜಮೀನಿಗೆ ಭೇಟಿ ನೀಡಿ ಸರ್ವೆ ಕೆಲಸ ಮಾಡುತ್ತಿದ್ದಾರೆ. ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಸುಮಾರು ಹತ್ತು ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿದೆ ಎಂದು ಆರೋಪಿಸಿ ಎಸ್.ಆರ್.ಹಿರೇಮಠ ಅವರು ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇದರಲ್ಲಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಡಿಸಿ ತಮ್ಮಣ್ಣ ಅವರ ಹೆಸರು ಕೂಡ ಉಲ್ಲೇಖ ಮಾಡಲಾಗಿದೆ. ಇದರ ವಿಚಾರಣೆಯನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದಲ್ಲಿ ವಿಭಾಗೀಯ ನ್ಯಾಯಪೀಠವೂ ನಡೆಸಿತ್ತು.

