Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದ ಮುಂದಿನ ಸಿಎಂ ಲಕ್ಷ್ಮೀ ಹೆಬ್ಬಾಳ್ಕರ್ : ನಿಜವಾಗುತ್ತಾ ಪ್ರಶಾಂತ್ ಕಿಣಿ ಭವಿಷ್ಯ..?

ಹೆಬ್ಬಾಳ್ಕರ್
---Advertisement---

 

 

 

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯನವರು ಖುರ್ಚಿ ಬಿಟ್ಟುಕೊಟ್ಟರೆ ಕೂರೋದಕ್ಕೆ ಹಲವರು ಇದ್ದಾರೆ. ಆದರೆ ಇಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮೊದಲ ಸ್ಪರ್ಧೆಯಲ್ಲಿದ್ದಾರೆ. ಹೀಗಿರುವಾಗ ಈಗ ಫೇಮಸ್ ಜ್ಯೋತಿಷಿಯವರು ಶಾಕಿಂಗ್ ಭವಿಷ್ಯವೊಂದನ್ನ ನುಡಿದಿದ್ದಾರೆ. ರಾಜ್ಯದಲ್ಲಿ ನೆಕ್ಸ್ಟ್ ಸಿಎಂ ಆಗಿ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರ ಸ್ವೀಕಾರ ಮಾಡಲಿದ್ದಾರೆಂದು ಭವಿಷ್ಯ ನುಡಿದಿದ್ದಾರೆ.

ದೆಹಲಿಯ ವಿಚಾರದಲ್ಲಿ ಪ್ರಶಾಂತ್ ಕಿಣಿ ನುಡಿದ ಭವಿಷ್ಯ ನಿಜವಾಗಿದೆ. 2024 ಅಕ್ಟೋಬರ್ 13ರಂದು ದೆಹಲಿಯ ಭವಿಷ್ಯ ನುಡಿದಿದ್ದರು. ದೆಹಲಿಯ ಅಧಿಕಾರದ ಗದ್ದುಗೆಯನ್ನ ಮಹಿಳೆಯೊಬ್ಬರು ಹಿಡಿಯಲಿದ್ದಾರೆ ಎಂದು ಟ್ವೀಟ್ ಮಾಡಿದ್ದರು. ಇದೀಗ ಆ ಭವಿಷ್ಯ ನಿಜವಾಗಿದ್ದು, 27 ವರ್ಷಗಳ ಬಳಿಕ ದೆಹಲಿಯಲ್ಲಿ ಕಮಲ ಅರಳಿದೆ. ರೇಖಾ ಗುಪ್ತ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಕರ್ನಾಟಕ ಭವಿಷ್ಯದ ಮೇಲೆ ಈಗ ಎಲ್ಲರ ಚಿತ್ತ ನೆಟ್ಟಿದೆ. ಶೀಘ್ರವೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದು, ಆ ಸ್ಥಾನವನ್ನೂ ಲಕ್ಷ್ಮೀ ಹೆಬ್ಬಾಳ್ಕರ್ ತುಂಬಲಿದ್ದಾರೆ ಎಂದು ಹೇಳಿದ್ದಾರೆ.

ಪ್ರಶಾಂತ್ ಕಿಣಿ ಅವರ ಪೋಸ್ಟ್ ರಾಜ್ಯ ರಾಜಕಾರಣದಲ್ಲಿ ಚರ್ಚೆ ಹುಟ್ಟು ಹಾಕಿದೆ. ದೆಹಲಿಯಲ್ಲಿ ಕಿಣಿಯವರ ಭವಿಷ್ಯ ನಿಜವಾಗಿರಬಹುದು. ಆದರೆ ಕರ್ನಾಟಕದಲ್ಲಿ ಅವರೇಳಿದಂತೆ ನಡೆಯುವುದು ಬಹಳ ಕಷ್ಟವಿದೆ. ಸಿದ್ದರಾಮಯ್ಯ ಅವರೇ ಈ ಅವಧಿ ಪೂರೈಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಸಿಎಂ ಹುದ್ದೆ ತೊರೆದರೂ ಕೂಡ ಡಿಕೆ ಶಿವಕುಮಾರ್ ಆ ಪಟ್ಟವನ್ನ ಅಲಂಕರಿಸಲು ಖುರ್ಚಿಯ ಪಕ್ಕದಲ್ಲಿಯೇ ನಿಂತಿರುವಾಗ ಲಕ್ಷ್ಮೀ ಹೆಬ್ಬಾಳ್ಕರ್ ಗಾಗಿ ಬಿಟ್ಟು ಕೊಡಲು ಸಾಧ್ಯವಿದೆಯಾ ಎಂಬ ಅಭಿಪ್ರಾಯಗಳು ಸೋಷಿಯಲ್ ಮೀಡಿಯಾದಲ್ಲಿ ಎದ್ದಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment