Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಕ್ತಿ ದೇವತೆ ತಾಯಿ ಚಾಮುಂಡಿ ಬಳಿ ಫೈಲ್ ಇಟ್ಟು ಪೂಜೆ : ಎಲ್ಲರ ಚಿತ್ತ ಯತ್ನಾಳ್ ಅತ್ತ..!

---Advertisement---

ಮೈಸೂರು: ಕಳೆದ ಕೆಲವು ದಿನಗಳಿಂದ ಯತ್ನಾಳ್ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ಅದರಲ್ಲೂ ಬಿಜೆಪಿಯಲ್ಲಿರುವ ಹಲವರು ಯತ್ನಾಳ್ ಬಣ ಸೇರಿಕೊಂಡಿದ್ದು, ಬಿವೈ ವಿಜಯೇಂದ್ರ ವಿರುದ್ಧ ಕೆಂಡ ಕಾರುತ್ತಿದ್ದಾರೆ. ಈ ಬಾರಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯತ್ನಾಳ್ ಬಣ ಸ್ಪರ್ಧಿಸಬೇಕೆಂದುಕೊಂಡಿತ್ತು. ಆದರೆ ಈ ಮಧ್ಯೆ ಶಿಸ್ತು ಸಮಿತಿ ನೋಟೀಸ್ ಕೂಡ ನೀಡಿದೆ. ಈ ಬೆನ್ನಲ್ಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಿಗೆ ಬಂದಿದ್ದಾರೆ.

ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಫೈಲ್ ಒಂದನ್ನ ಇಟ್ಟು ಪೂಜೆ ಮಾಡಿಸಿದ್ದಾರೆ. ಆದರೆ ಆ ಫೈಲ್ ಯಾವುದು ಎಂಬುದರ ಬಗ್ಗೆ ಯಾವುದೇ ಮಾಹಿತಿ ಬಿಟ್ಟು ಕೊಟ್ಟಿಲ್ಲ. ಆದರೆ ಚಾಮುಂಡಿ ತಾಯಿಯ ಬಳಿ ಫೈಲ್ ಇಟ್ಟು ಪೂಜೆ ಮಾಡಿಸಿದ್ದಾರೆಂದರೆ ಅದು ಬಹಳ ಮುಖ್ಯವಾದ ಫೈಲ್ ಆಗಿರುತ್ತದೆ. ಯಾಕಂದ್ರೆ ವಿಜಯೇಂದ್ರ ವಿರುದ್ಧ ಸದಾ ವಾಗ್ದಾಳಿ ನಡೆಸುತ್ತಿರುವ ಯತ್ನಾಳ್, ಇನ್ನಷ್ಟು ದಾಖಲೆಗಳನ್ನೇನಾದರೂ ಅದರಲ್ಲಿಟ್ಟು ಪೂಜೆ ಸಲ್ಲಿಸಿದ್ದಾರಾ..? ಪೂಜೆಯ ಬಳಿಕ ಆ ದಾಖಲೆಗಳನ್ನ ಹೈಕಮಾಂಡ್ ಗೆ ನೀಡುತ್ತಾರಾ ಎಂಬುದನ್ನು ನೋಡಬೇಕಿದೆ.

ನಿನ್ನೆ ಬೇರೆ ಯತ್ನಾಳ್ ನೇತೃತ್ವದಲ್ಲಿ ರೆಬೆಲ್ ನಾಯಕರ ಸಭೆ ನಡೆದಿದೆ. ಈ ಬಗ್ಗೆ ಮಹತ್ವದ ಚರ್ಚೆ ಕೂಡ ನಡೆದಿದೆ. ಆದರೆ ಯತ್ನಾಳ್ ಬಣದಿಂದ ಮತ್ತಿಬ್ಬ ಸ್ಪರ್ಧಿಯನ್ನು ಕಣಕ್ಕೆ ಇಳಿಸುವ ಯೋಚನೆಯನ್ನು ಕೈಬಿಟ್ಟಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಹೈಕಮಾಂಡ್ ನಾಯಕರೇ ಈ ಸಂಬಂಧ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಸುಮ್ಮನಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಪಕ್ಷದಲ್ಲಿ ಸಂಪೂರ್ಣ ಸಹಕಾರ ಸಿಗದೆ ಇರುವುದು ಹಾಗೂ ಕೆಲವು ತಟಸ್ಥ ಬಣದವರು ಬೆಂಬಲ ನೀಡಲು ಹಿಂದೇಟು ಹಾಕುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment