ಬೆಂಗಳೂರು: ಏರುತ್ತಲೆ ಇದ್ದ ಚಿನ್ನದ ದರ ಇಂದು ಇಳಿಕೆಯನ್ನು ತೋರಿಸಿ, ಖುಷಿ ನೀಡಿದೆ. 22 ಕ್ಯಾರೆಟ್ ಚಿನ್ನದ ದರದ ಮೇಲೆ 45 ರೂಪಾಯಿ ಏರಿಕೆಯಾಗಿದ್ದು, ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 8,025 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ದರದಲ್ಲಿ 49 ರೂಪಾಯಿ ಏರಿಕೆಯಾಗಿದ್ದು, 8,755 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂ 80,250 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 87,750 ರೂಪಾಯಿ ಆಗಿದೆ.
ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 80,250 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 80,400 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 77,430 ರೂಪಾಯಿ ಇದೆ. ಅಮೆರಿಕಾದಲ್ಲಿ 77,540 ಇದೆ. ಸೌದಿಯಲ್ಲಿ 77,160 ಇದೆ.
ಇನ್ನು ತುಂಬಾ ದಿನಗಳಿಂದ ಬೆಳ್ಳಿ ಬೆಲೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗದೆ, ಯಥಾಸ್ಥಿತಿ ಕಾಪಾಡಿಕೊಂಡಿದ್ದ ಬೆಲೆ ಇಂದು ಹತ್ತು ಪೈಸೆಯಷ್ಟು ಇಳಿಕೆಯಾಗಿದೆ. ಈ ಮೂಲಕ ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 100.40 ರೂಪಾಯಿ ಇದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 10,040 ರೂಪಾಯಿ ಇದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 10,040 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 10,790 ರೂಪಾಯಿ ಇದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










