ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 21 : ಸ್ಲಂ ನಿವಾಸಿಗಳ ಜನಸಂಖ್ಯೆಗನುಗುಣವಾಗಿ ಬಜೆಟ್‍ನಲ್ಲಿ ಹೆಚ್ಚಿನ ಅನುದಾನ ಮೀಸಲಿಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಫೆ.24 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯಿಸುವ ಸಮಾವೇಶ ಹಮ್ಮಿಕೊಳ್ಳಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಐದು ಸಾವಿರಕ್ಕೂ ಹೆಚ್ಚು ಸ್ಲಂ ನಿವಾಸಿಗಳು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೊಳಗೇರಿ ನಿವಾಸಿಗಳು ಭಾಗವಹಿಸುವಂತೆ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಸಂಚಾಲಕಿ ಸುಧಾ ಡಿ. ಕೋರಿದ್ದಾರೆ.



