Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಹೇಗಿದೆ ಇಲಾಖೆಯಿಂದ ತಯಾರಿ.. ಖಡಕ್ ರೂಲ್ಸ್ ಜಾರಿ..!

---Advertisement---

 

 

ಬೆಂಗಳೂರು; ಇನ್ನೊಂದು ವಾರವಷ್ಟೇ ಶೈಕ್ಷಣಿಕ ವರ್ಷದ ಪರೀಕ್ಷೆಗಳು ಆರಂಭವಾಗುತ್ತವೆ. ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿವೆ. ಅದರ ಜೊತೆಗೆ ಮಾರ್ಚ್ 21ರಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಶುರುವಾಗಲಿವೆ. ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಲು ಶಿಕ್ಷಣ ಇಲಾಖೆ ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಪರೀಕ್ಷೆಗೆ ಬೇಕಾದ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಇಲಾಖೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದೆ. ವಿದ್ಯಾರ್ಥಿಗಳು, ಪರೀಕ್ಷಾ ಕೇಂದ್ರದ ಮಾಹಿತಿಯನ್ನು ಅಧಿಕಾರಿಗಳ ಮಟ್ಟದಲ್ಲಿ ಹಂಚಿಕಿಂಡು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ.

ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಗುರುತಿಸಿಲಾಗಿದ್ದು, ಸುತ್ತ ಮುತ್ತ ಯಾವುದೇ ರೀತಿಯ ತೊಂದರೆಗಳಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ. ಪ್ರಶ್ನೆ ಪತ್ರಿಕೆಯ ಸಾಗಾಟ ಮಾಡಲು ತ್ರಿಸದಸ್ಯ ಸಮಿತಿಯನ್ನು ನೇಮಕ ಮಾಡಲಾಗಿದೆ. ಮುಖ್ಯ ಅಧೀಕ್ಷಕರು, ಉತ್ತರ ಪತ್ರಿಕೆ ಪಾಲಕರ ನೇಮಕವಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಸಹ ಮುಖ್ಯ ಅಧೀಕ್ಷಕರು ಮತ್ತು ಜಾಗೃತ ದಳದ ಸದಸ್ಯರನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ಪೊಲೀಸ್ ಇಲಾಖೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ಒದಗಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಅಧೀಕ್ಷಕರಿಗೆ ಈಗಾಗಲೇ ತರಬೇತಿ ನೀಡಲಾಗಿದ್ದು, ಅವರು ತಮ್ಮ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಪರೀಕ್ಷಾ ಸಿಬ್ಬಂದಿಗೆ ತರಬೇತಿ ನೀಡಲಿದ್ದಾರೆ. ಈ ಬಾರಿ ಪರೀಕ್ಷೆ ನಡೆಸುವುದನ್ನು ವೆಬ್ ಕಾಸ್ಟಿಂಗ್ ಮೂಲಕ ವೀಕ್ಷಿಸಲಾಗುತ್ತದೆ. ಆದ್ದರಿಂದ ಪ್ರಯಿ ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮಾರಾ ಅಳವಡಿಕೆ ಕಡ್ಡಾಯವಾಗಿರುತ್ತದೆ. ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...