Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವ ಸ್ಥಾನಕ್ಕೆ ಕೆ.ಎನ್.ರಾಜಣ್ಣ ರಾಜೀನಾಮೆ ; ಏನಿದು ಗುಬ್ಬಿ MLA ಫ್ಯಾನ್ ಪೇಜ್ ಪೋಸ್ಟ್..?

---Advertisement---

 

ತುಮಕೂರು, ಫೆಬ್ರವರಿ. 26 : ಕಾಂಗ್ರೆಸ್ ಪಾಳಯದಲ್ಲಿ ಮೊದಲೇ ಹಗ್ಗಜಗ್ಗಾಟ ನಡೆಯುತ್ತಿದೆ. ಸಿಎಂ ಸ್ಥಾನ ಬದಲಾವಣೆ ಚರ್ಚೆ ಒಂದು ಕಡೆಯಾದರೆ ಇತ್ತ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆಯೂ ಮತ್ತೊಂದು ಕಡೆ ಆಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಪೈಪೋಟಿಯಲ್ಲಿ ಇದ್ದಾರೆ. ಇದರ ನಡುವೆ ಕೆ.ಎನ್.ರಾಜಣ್ಣ ರಾಜೀನಾಮೆಯ ವಿಚಾರ ಸುದ್ದಿಯಾಗುತ್ತಿದೆ. ಇತ್ತೀಚೆಗಷ್ಟೇ ಗೃಹ ಸಚಿವ ಜಿ.ಪರಮೇಶ್ವರ್ ಅವರು ಬಹಿರಂಗವಾಗಿಯೇ ತಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದಿದ್ದರು. ಇದೀಗ ರಾಜಣ್ಣನವರ ರಾಜೀನಾಮೆ ಪೋಸ್ಟರ್ ವೈರಲ್ ಆಗುತ್ತಿದೆ.

ಕಳೆದ ಕೆಲವು ದಿನಗಳ ಹಿಂದಷ್ಟೇ ತುಮುಲ್ ಅಧ್ಯಕ್ಷರ ಚುನಾವಣೆಯಲ್ಲಿ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ಪತ್ನಿ ಭಾರತಿದೇವಿ ಅವರು ಅಧ್ಯಕ್ಷ ಸ್ಥಾನದಿಂದ ವಂಚಿತರಾಗಿದ್ದರು. ಗುಬ್ಬಿ ಶ್ರೀನಿವಾಸ್ ಕೂಡ ಪರಮೇಶ್ವರ್ ಹಾಗೂ ರಾಜಣ್ಣ ವಿರುದ್ಧ ನೇರವಾಗಿಯೇ ಆಕ್ರೋಶ ಹೊರ ಹಾಕಿದ್ದರು. ಇದೀಗ ಶಾಸಕ ಶ್ರೀನಿವಾಸ್ ಅವರ ಅಭಿಮಾನಿ ಬಳಗದವರು ರಾಜಣ್ಣ ರಾಜೀನಾಮೆ ಬಗ್ಗೆ ಪೋಸ್ಟ್ ಹಾಕುತ್ತಿದ್ದಾರೆ. ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಗುಬ್ಬಿ ಶ್ರೀನಿವಾಸ್ ಅವರ ಫ್ಯಾನ್ ಪೇಜ್ ನಲ್ಲಿ ರಾಜಣ್ಣ ಕಂಪ್ಯೂಟರ್ ನೋಡುತ್ತಾ ಕುಳಿತಿದ್ದು, ಆ ಪರದೆ ಮೇಲೆ ಸಚಿವ ಕೆ.ಎನ್.ರಾಜಣ್ಣ ರಾಜೀನಾಮೆ ಎಂದು ತೋರಿಸುತ್ತಿರುವ ಫೋಟೋ ಇದಾಗಿದೆ. ಇನ್ನು ಈ ಫ್ಯಾನ್ ಪೇಜ್ ನಲ್ಲಿ ಹಲವು ದಿನಗಳಿಂದಾನೂ ಕೆ.ಎನ್.ರಾಜಣ್ಣ ಹಾಗೂ ಪರಮೇಶ್ವರ್ ವಿರುದ್ಧದ ಪೋಸ್ಟ್ ಗಳೇ ಹರಿದಾಡುತ್ತಿವೆ. ಕೆ.ಎನ್.ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದು, ಸದ್ಯ ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment