Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನಾಳೆ ಉದ್ಯೋಗಮೇಳ : ಸಚಿವ ಡಿ. ಸುಧಾಕರ್ ರಿಂದ ಉದ್ಘಾಟನೆ

---Advertisement---

 

ಚಿತ್ರದುರ್ಗ ಫೆ. 28 :  ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಇವರ ಸಂಯುಕ್ತಾಶ್ರಯದಲ್ಲಿ “ಕೌಶಲ್ಯ ರೋಜಗಾರ್ ಮೇಳ”, ಉದ್ಯೋಗ ಮೇಳ ಕಾರ್ಯಕ್ರಮ ಮಾ. 01 ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ನಡೆಯಲಿದೆ.

 

ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಸಂಸದ ಗೋವಿಂದ ಕಾರಜೋಳ ಘನ ಉಪಸ್ಥಿತಿ ವಹಿಸುವರು.  ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಅಧ್ಯಕ್ಷತೆ ವಹಿಸುವ ಈ ಕಾರ್ಯಕ್ರಮದಲ್ಲಿ ಶಾಸಕರುಗಳಾದ ಬಿ.ಜಿ. ಗೋವಿಂದಪ್ಪ, ಟಿ. ರಘುಮೂರ್ತಿ, ಎನ್.ವೈ. ಗೋಪಾಲಕೃಷ್ಣ, ಎಂ. ಚಂದ್ರಪ್ಪ, ವಿಧಾನಪರಿಷತ್ ಸದಸ್ಯರುಗಳಾದ ಚಿದಾನಂದ ಎಂ. ಗೌಡ, ಕೆ.ಎಸ್. ನವೀನ್, ಡಿ.ಟಿ. ಶ್ರೀನಿವಾಸ್, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಿವಕಾಂತಮ್ಮ ನಾಯಕ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ. ಬಿ. ಯೋಗೇಶ್ ಬಾಬು, ಆದಿ ಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್. ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಬಿ.ಎನ್. ಸುಮಿತಾ ರಾಘವೇಂದ್ರ ಸೇರಿದಂತೆ ವಿವಿಧ ಗಣ್ಯರು, ಉನ್ನತ ಅಧಿಕಾರಿಗಳು ಭಾಗವಹಿಸುವರು.

ಮಹನೀಯರ ಜಯಂತಿ : ಮಾ. 04 ರಂದು ಪೂರ್ವಭಾವಿ ಸಭೆ

ಜಿಲ್ಲಾ ಕೇಂದ್ರದಲ್ಲಿ ಮಾ. 12 ರಂದು ರೇಣುಕಾಚಾರ್ಯ ಜಯಂತಿ ಹಾಗೂ ಮಾ. 14 ರಂದು ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಜಯಂತಿ ಆಚರಣೆ ಸಂಬಂಧ ಮಾ. 04 ರಂದು ಪೂರ್ವಭಾವಿ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ರೇಣುಕಾಚಾರ್ಯ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ ಮಾ. 04 ರಂದು ಬೆಳಿಗ್ಗೆ 11 ಗಂಟೆಗೆ ಹಾಗೂ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ ಅದೇ ದಿನ ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.  ಎಲ್ಲ ಸಮಾಜದ ಮುಖಂಡರು ಸಭೆಗೆ ಹಾಜರಾಗಿ ಸಲಹೆ ಸೂಚನೆಗಳನ್ನು ನೀಡಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

 

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...