Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭದ್ರಾ ಜಲಾಶಯ ಅಚ್ಚುಕಟ್ಟು ಕೊನೆ ಭಾಗಕ್ಕೂ ನೀರು ಪೂರೈಸಲು ಕ್ರಮ : ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ

---Advertisement---

ದಾವಣಗೆರೆ, ಮಾ.01 : ಭದ್ರಾ ಜಲಾಶಯದ ಕಾಲುವೆ ಮೂಲಕ ಬಿಡುವ  ನೀರು ಕೊನೆ ಭಾಗದ ಅಚ್ಚುಕಟ್ಟು ದಾರರಿಗೂ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ ತಿಳಿಸಿದರು.

ಶನಿವಾರ(ಮಾ.01) ರಂದು  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಭದ್ರಾಅಚ್ಚುಕಟ್ಟು ಪ್ರದೇಶದ ರೈತರೊಂದಿಗೆ ನಡೆಸಿದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭದ್ರಾ ಜಲಾಶಯದಿಂದ ಅಚ್ಚುಕಟ್ಟು ದಾರರಿಗೆ ನೀರು ಹರಿಸಿ ಒಂದೆರಡು ದಿನಗಳಲ್ಲಿ ನಿಮ್ಮ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ರೈತರಿಗೆ ಭರವಸೆ ನೀಡಿದರು, ಕಾಲುವೆಗಳಿಗೆ ಅನಧಿಕೃತವಾಗಿ ಪಂಪ್ ಅಳವಡಿಸಿ ನೀರೆತ್ತಲಾಗುತ್ತಿದೆ, ಇದರಿಂದ ಕೊನೆ ಭಾಗದ ರೈತರಿಗೆ ನೀರು ಸಿಗುತ್ತಿಲ್ಲ. ಅನಧಿಕೃತ ಪಂಪ್ ಗಳನ್ನು  ತೆರವು ಮಾಡಿ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡಲಾಗುತ್ತದೆ ಎಂದರು.
ಬೇಸಿಗೆಯಾಗಿರುವುದರಿಂದ ಗೇಟ್ ಗಳಲ್ಲಿ ನೀರಿನ ಸೋರಿಕೆ ಮತ್ತು ಕಾಲುವೆ ದುರಸ್ಥಿಗೆ ಅಗತ್ಯ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಕಳುಹಿಸಲಾಗುತ್ತದೆ ಎಂದು ರೈತರಿಗೆ ತಿಳಿಸಿದರು.
ಕಾಲುವೆಗಳ ನೀರು ನಿರ್ವಹಣೆಗೆ ಸಿಬ್ಬಂದಿಗಳ ಕೊರತೆ ಇದ್ದು ಈ ಸಮಸ್ಯೆಯನ್ನು  ಬಗೆಹರಿಸಲು ಅಧೀಕ್ಷಕ ಇಂಜಿನಿಯರ್ ಗೆ ಸೂಚಿಸಿದರು.
ಶಾಸಕರಾದ ಬಿ.ಪಿ ಹರೀಶ್ ಮಾತನಾಡಿ ಜಲಾಶಯದ ದುರಸ್ಥಿ ಮಾಡಿಸಿ, ಭದ್ರಾ ಇಂಜಿನಿಯರ್‍ಗಳು ವೈಜ್ಞಾನಿಕ ತಂತ್ರಜ್ಞಾನ ಬಳಸಿ ನೀರು ಪೆÇೀಲಾಗದಂತೆ ಕ್ರಮ ತೆಗೆದುಕೊಳ್ಳಬೇಕೆಂದರು. ಭದ್ರಾ ನಾಲೆ ಅಚ್ಚುಕಟ್ಟು ಪ್ರದೇಶದ ಬಹುತೇಕ ಭಾಗದಲ್ಲಿ ನೀರಾವರಿ ಕಟ್ಟಡ ಹಾಗೂ ನಾಲೆಯ ಗೇಟ್‍ಗಳು ಹಾಳಾಗಿವೆ. ಆದ್ದರಿಂದ ನೀರು ಹೆಚ್ಚಿನ ಪ್ರಮಾಣದಲ್ಲಿ ಪೆÇೀಲಾಗುತ್ತಿದೆ ಎಂದು ವಿವರಿಸಿದರು.
ಸಿಬ್ಬಂದಿ ಕೊರತೆಯಿಂದ ಬಸವಾಪಟ್ಟಣ ಕೊನೆ ಭಾಗಕ್ಕೆ ನೀರು ತಲುಪಿಲ್ಲ ಎಂದು ಎಇಇ ಧನಂಜಯ ಸ್ಪಷ್ಟನೆ ನೀಡಿದರು.
ಭದ್ರಾ ಜಲಾಶಯದಿಂದ ನೀರು ಹರಿಸಿ 50 ದಿನ ಕಳೆದಿದೆ, ಇನ್ನೂ 70 ದಿನ ಮಾತ್ರ ಬಾಕಿ ಉಳಿದಿದೆ.  ಕೊನೆ ಭಾಗದ ಅಚ್ಚುಕಟ್ಟು ಪ್ರದೇಶಗಳಾದ ಮಲೇಬೆನ್ನೂರು, ಬಸವಪಟ್ಟಣದ ರೈತರ ಜಮೀನುಗಳಿಗೆ ನೀರು ಇನ್ನೂ ತಲುಪಿಲ್ಲ. ಭದ್ರಾ ಜಲಾಶಯದ ನೀರು ಜಿಲ್ಲೆಯ ಜೀವನಾಡಿಯಾಗಿದ್ದು, ಈ ನೀರು ನಂಬಿ ಲಕ್ಷಾಂತರ ಎಕರೆ ಭೂಮಿಯಲ್ಲಿ ರೈತರು ಬೆಳೆ ಬೆಳೆಯುತ್ತಿದ್ದಾರೆ. ತಿಂಗಳು ಸಮೀಪವಾದರೂ ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಬರುತ್ತಿಲ್ಲ. ಭದ್ರಾ ಜಲಾಶಯದ ನೀರನ್ನು ನಂಬಿ ಭತ್ತ ನಾಟಿ ಮಾಡಿರುವ ಲಕ್ಷಾಂತರ ರೈತರು ನೀರಿಗಾಗಿ ಕಾದು ಕುಳಿತಿದ್ದಾರೆ. ಮಲೇಬೆನ್ನೂರಿನ ಕೊನೆ ಭಾಗದ ರೈತರು ಸೇರಿದಂತೆ ಹತ್ತಾರು ಹಳ್ಳಿಗಳು ನೀರಿನ ದಾರಿ ಕಾಯುತ್ತಿವೆ. ತಿಂಗಳು ಸಮೀಪವಾದರೂ ಈ ಪ್ರದೇಶಕ್ಕೆ ನೀರು ಬರುತ್ತಿಲ್ಲ ಎಂದು ರೈತರು ಅಕ್ರೋಶ ವ್ಯಕ್ತ ಪಡಿಸಿದರು.
ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಹೆಚ್ಚುವರಿ ಪೆÇಲೀಸ್ ಅಧೀಕ್ಷಕರಾದ ಮಂಜುನಾಥ, ಜಿಲ್ಲಾ ಯೋಜನಾ ನಿರ್ದೇಶಕರಾದ ಮಹಾಂತೇಶ್ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...