Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ  ವೈದ್ಯಕೀಯ ಕಾಲೇಜು : ವೈದ್ಯರ ನೇಮಕಾತಿ ಪ್ರಕ್ರಿಯೆಗೆ ಕೆಡಿಪಿ ಸಭೆಯಲ್ಲಿ ತೀವ್ರ ಅಸಮಾಧಾನ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 01 : ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರ ನೇಮಕಾತಿಗೆ ಸಂಬಂಧಿಸಿದಂತೆ ನಿರ್ದೇಶಕರ ಕಾರ್ಯವೈಖರಿ ಕುರಿತು ಸಚಿವರು, ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ಚರ್ಚೆಯಾಯಿತು.
ಚಿತ್ರದುರ್ಗ  ವೈದ್ಯಕೀಯ ಕಾಲೇಜು ವೈದ್ಯರ ನೇಮಕಾತಿ ಸಂದರ್ಶನ ಚಿತ್ರದುರ್ಗದ ಬದಲಾಗಿ ಬೆಂಗಳೂರಿನಲ್ಲಿ ಯಾಕೆ ನಡೆಸಿದಿರಿ, ತಜ್ಞ ವೈದ್ಯರಿಗೆ ಗೌರವಧನ ನೀಡಿ, ಚಿತ್ರದುರ್ಗದಲ್ಲಿಯೇ ಸಂದರ್ಶನ ಏರ್ಪಡಿಸಬಹುದಿತ್ತು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವೈದ್ಯಕೀಯ ಕಾಲೇಜು ನಿರ್ದೇಶಕರನ್ನು ಪ್ರಶ್ನಿಸಿದರು.

ಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ ಸಂಬಂಧಿಸಿದಂತೆ ವಾರಕ್ಕೊಮ್ಮೆ ಜಿಲ್ಲಾಧಿಕಾರಿ ಹಾಗೂ ತಿಂಗಳಿಗೊಮ್ಮೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನೆ ನಡೆಸುವುದು ಸೂಕ್ತ ಎಂದರು.

ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ಎಲ್ಲರ ಪ್ರಯತ್ನದ ಫಲವಾಗಿ ಜಿಲ್ಲೆಯ ವೈದ್ಯಕೀಯ ಕಾಲೇಜು ಮಂಜೂರಾಗಿದೆ. ಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ ಕಟ್ಟಡಗಳು, ವಿದ್ಯಾರ್ಥಿ ನಿಲಯ, ಬೋಧಕ, ಬೋಧಕೇತರ ಸಿಬ್ಬಂದಿ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಆದಾಗ್ಯ ವೈದ್ಯರ ನೇಮಕಾತಿ ಸಂದರ್ಶನ ಬೆಂಗಳೂರಿನಲ್ಲಿ ಮಾಡುವ ಅನಿವಾರ್ಯತೆ ಏನಿತ್ತು. ನಿಮ್ಮದೇ ತೀರ್ಮಾನ ಮಾಡುತ್ತಿರಾ ಎಂದು ಪ್ರಶ್ನಿಸಿದರು.

ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ ಅವರು, ವೈದ್ಯಕೀಯ ಕಾಲೇಜಿಗೆ ವೈದ್ಯರ ನೇಮಕಾತಿಯಲ್ಲಿ ಬಹಳಷ್ಟು ದೂರುಗಳು ಕೇಳಿಬರುತ್ತಿವೆ.  ಈ ಬಗ್ಗೆ ನೊಂದವರೇ ನಮ್ಮ ಗಮನಕ್ಕೆ ತಂದಿದ್ದಾರೆ ಎಂದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment