ಬೆಂಗಳೂರು: ಒಂದು ಕಡೆ ಒಮಿಕ್ರಾನ್ ಭೀತಿ ಮತ್ತೊಂದು ಕಡೆ ವಿದ್ಯಾರ್ಥಿಗಳಲ್ಲಿ ಕೊರೊನಾ ಹೆಚ್ಚಳ. ಈ ಆತಂಕದ ನಡುವೆಯೇ ನಡೆಯುತ್ತಿದೆ ಶಾಲಾ ಕಾಲೇಜುಗಳು. ವೈರಸ್ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿರುವ ಹಿನ್ನೆಲೆ ಶಾಲಾ ಕಾಲೇಜುಗಳನ್ನ ಮುಚ್ಚುತ್ತಾರಾ ಎಂಬ ಪ್ರಶ್ನೆ ಹಲವರಲ್ಲಿ ಕಾಡುತ್ತಿತ್ತು. ಇದೀಗ ಆ ಪ್ರಶ್ನೆಗೆ ಶಿಕ್ಷಣ ಸಚಿವ ನಾಗೇಶ್ ಉತ್ತರಿಸಿದ್ದಾರೆ.
ಯಾವುದೇ ಕಾರಣಕ್ಕೂ ಶಾಲಾ ಕಾಲೇಜುಗಳನ್ನ ಮುಚ್ಚಲ್ಲ. ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ಎಂದಿನಂತೆ ಶಾಲಾ ಕಾಲೇಜುಗಳು ಎಂದಿನಂತೆ ನಡೆಯಲಿವೆ. ಮೂರನೆ ಅಲೆ ಹಾಗೂ ಒಮಿಕ್ರಾನ್ ಬಗ್ಗೆ ತಜ್ಞರ ಬಳಿ ಚರ್ಚೆ ಮಾಡಲಾಗಿದೆ. ಫೆಬ್ರವರಿಯಲ್ಲಿ ಒಮಿಕ್ರಾನ್ ಹೆಚ್ಚಾಗುವ ಲಕ್ಷಣವಿದೆ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಮುಂಜಾಗ್ರತೆಯೊಂದಿಗೆ ಶಾಲಾ ಕಾಲೇಜುಗಳನ್ನ ನಡೆಸಲಾಗಿದೆ.
ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲೂ ಕಡ್ಡಾಯವಾಗಿ ನಿಯಮಗಳನ್ನ ಪಾಲಿಸಬೇಕಾಗಿದೆ. ಪೋಷಕರು ಎರಡು ಡೋಸ್ ಕಡ್ಡಾಯವಾಗಿ ವ್ಯಾಕ್ಸಿನ್ ಮಾಡಿಸಿಕೊಳ್ಳಿ. ಶಾಲೆಗಳಲ್ಲಿ ಮಾಸ್ಕ್, ಸ್ಯಾನಿಟೈಸ್ ಉಪಯೋಗಿಸಿ. ಹೆಚ್ಚು ಮುಂಜಾಗ್ರತೆ ವಹಿಸಿ ಎಂದು ಸಲಹೆ ನೀಡಿದ್ದಾರೆ.