Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೋಮಾಳ ಜಮೀನು ರಕ್ಷಿಸಿ : ಚಿಕ್ಕಬೆನ್ನೂರು ಗ್ರಾಮಸ್ಥರ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 03 : ಚಿಕ್ಕಬೆನ್ನೂರು ಗ್ರಾಮದ ರಿ.ಸ.ನಂ. 69 ರ ಸರ್ಕಾರಿ ಗೋಮಾಳವನ್ನು ರಕ್ಷಿಸುವಂತೆ ಭರಮಸಾಗರ ಹೋಬಳಿ ಚಿಕ್ಕಬೆನ್ನೂರು ಗ್ರಾಮಸ್ಥರು ತಹಶೀಲ್ದಾರ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಚಿಕ್ಕಬೆನ್ನೂರು ಗ್ರಾಮದ ಎಲ್ಲಾ ಜನಾಂಗದವರ ಹಸು, ಎಮ್ಮೆ, ಕುರಿ, ಮೇಕೆ ಇವುಗಳು ಮೇಯಲು ಜಾಗವಿಲ್ಲದ ಕಾರಣ 2012-13 ರಲ್ಲಿ ಅಂದಿನ ತಹಶೀಲ್ದಾರ್ ಕಾಂತರಾಜ್ ಗೋಮಾಳ ಜಮೀನು ಒತ್ತುವರಿಯಾಗಿರುವುದನ್ನು ತೆರವುಗೊಳಿಸಿ ಜಾನುವಾರುಗಳ ಮೇವಿಗೆ ಅವಕಾಶ ಮಾಡಿಕೊಟ್ಟಿದ್ದರು. ಕೆಲವು ಪ್ರಭಾವಿಗಳು ಈಗ ಗೋಮಾಳ ಜಮೀನಿನಲ್ಲಿ ಉಳುಮೆ ಮಾಡುವ ಹುನ್ನಾರ ನಡೆಸುತ್ತಿರುವುದರಿಂದ ಕಾನೂನು ರೀತಿ ಕ್ರಮ ಕೈಗೊಂಡು ಗೋಮಾಳಕ್ಕೆ ಸೇರಿದ 49 ಎಕರೆ ಹದಿನೆಂಟು ಗುಂಟೆ ಜಮೀನನ್ನು ರಕ್ಷಿಸುವಂತೆ ಚಿಕ್ಕಬೆನ್ನೂರು ಗ್ರಾಮಸ್ಥರು ಒತ್ತಾಯಿಸಿದರು.

ರೈತ ಮುಖಂಡರುಗಳಾದ ಬಸ್ತಿಹಳ್ಳಿ ಸುರೇಶ್‍ಬಾಬು, ಧನಂಜಯ ಹಂಪಯ್ಯನಮಾಳಿಗೆ, ನಿಂಗಪ್ಪ, ಕರಿಯಪ್ಪ, ಆರ್.ನಾಗರಾಜ್, ದೇವರಾಜ್, ಚನ್ನಬಸಪ್ಪ, ವಿ.ಕಲ್ಪನಾ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...